ದಿನದ ಸುದ್ದಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಪ್ರೋತ್ಸಹಿಸುವ ಸಲುವಾಗಿ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ರವರು ನಡೆಸುವ 10ನೇ ತರಗತಿ ಪರೀಕ್ಷೆಗಳಲ್ಲಿ ಶೇ.60 ರಿಂದ 74.99 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಕ್ರಮವಾಗಿ ತಲಾ ರೂ.7000/- ಮತ್ತು 15000/-ಗಳ ಪ್ರೋತ್ಸಹ ಧನವನ್ನು ನೀಡಲಾಗುತ್ತದೆ.

ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕಡೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version