ದಿನದ ಸುದ್ದಿ

ಎಸ್ಸಿ – ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ಹಾಸನ : 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ತೇರ್ಗಡೆ ಹೊಂದಿದ ಪ.ಜಾತಿ/ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ.

ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ವಿಳಾಸ www.sw.kar.nic.in / www.st.kar.nic.in ಇಲ್ಲಿಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ಆಯಾ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಹಾಸನ ಇಲ್ಲಿಗೆ ಸಲ್ಲಿಸತಕ್ಕದ್ದು. ನ. 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version