ದಿನದ ಸುದ್ದಿ

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ,ತುಮಕೂರು : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2020ರಲ್ಲಿ ಎಸ್.ಎಸ್.ಎಲ್.ಸಿ./ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ತರಗತಿಗಳ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅರ್ಹ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ “ಜಡಗ ಹಾಗೂ ಬಾಲ” ಅವರ ಹೆಸರಿನಲ್ಲಿ 1 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಅದೇ ರೀತಿ 2020ರಲ್ಲಿ ದ್ವಿತೀಯ ಪಿಯುಸಿ/ಡಿಪ್ಲೋಮಾ/ಪದವಿ/ಸ್ನಾತಕೋತ್ತರ ಪದವಿ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಒದಗಿಸಲಾಗುವುದು.

ಸೌಲಭ್ಯಗಳಿಗಾಗಿ ಅರ್ಹ ವಿದ್ಯಾರ್ಥಿಗಳು ಜಾಲತಾಣ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. “ಜಡಗ ಹಾಗೂ ಬಾಲ” ಪ್ರೋತ್ಸಾಹಧನಕ್ಕೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸುವ ಅಗತ್ಯವಿಲ್ಲ.

ಉಳಿದ ಅರ್ಹ ವಿದ್ಯಾರ್ಥಿಗಳು ನವೆಂಬರ್ 30ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮನಾಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಥವಾ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version