ದಿನದ ಸುದ್ದಿ
ದಾವಣಗೆರೆ | ಚೇತನಾ ಯೋಜನೆಯಡಿ ಎಸ್ ಸಿ -ಎಸ್ ಟಿ ದಮನಿತ ಮಹಿಳೆಯರಿಂದ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಚೇತನ ಯೋಜನೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದಮನಿತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ 34 ಹಾಗೂ ಪರಿಶಿಷ್ಟ ಪಂಗಡದ 12 ದಮನಿತ ಮಹಿಳೆಯರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ದಾವಣಗೆರೆ ತಾಲ್ಲೂಕು ಭೌತಿಕ 14 ಹಾಗೂ ಉಳಿದ ತಾಲ್ಲೂಕುಗಳಿಗೆ ತಲಾ 08 ರಂತೆ ಒಟ್ಟು 46 ಗುರಿಯನ್ನು ನಿಗದಿಪಡಿಸಲಾಗಿದೆ.
ದಮನಿತ ಮಹಿಳೆಯರು ತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನ ನಡೆಸಲು ಮತ್ತು ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಲು ರೂ. 50 ಸಾವಿರ ಸಾಲ ಹಾಗೂ ರೂ. 50 ಸಾವಿರ ಸಹಾಯಧನ ಸೇರಿ ಒಟ್ಟು ಘಟಕ ವೆಚ್ಚ ರೂ. 1 ಲಕ್ಷ ನೀಡಲಾಗುತ್ತದೆ.
ಆಸಕ್ತಿ ಹೊಂದಿದವರು ಅರ್ಜಿಗಳನ್ನು ಶ್ರೀದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ, ಕಾವೇರಮ್ಮ ಹೈಸ್ಕೂಲ್ ಪಕ್ಕದ ತ್ರಿಶೂಲ್ ಟಾಕೀಸ್ ರೋಡ್ ದಾವಣಗೆರೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿ ಮತ್ತು ಮೂಲ ದಾಖಲೆಗಳೊಂದಿಗೆ ಜೂ.25 ರಂದು ಸಂಜೆ 5.30 ರೊಳಗಾಗಿ ಸಂಸ್ಥೆಯ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ 08192-296268 ದೂರವಾಣಿ ಸಂಖ್ಯೆಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243