ದಿನದ ಸುದ್ದಿ

ವಿದ್ಯಾರ್ಥಿ ವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಶುಲ್ಕವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲು ಆಹ್ವಾನಿಸಲಾಗಿದ್ದ ಆನ್‍ಲೈನ್ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ 05 ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ಮಾ.20 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ : www.ssp.postmatric.karnataka.gov.in
ದೂ.ಸಂ: 8050770005/8050770004 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ: 080-35254757 ಇಮೇಲ್- postmetrichelpdesk@karnataka.gov.in ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version