ದಿನದ ಸುದ್ದಿ
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಗ್ಧ ಕಂದಮ್ಮಗಳನ್ನು ಕಳೆದುಕೊಂಡ ಕುಟುಂಬಗಳ ಆಘಾತದ ನೋವು ಊಹಿಸಲೂ ಅಸಾಧ್ಯವಾಗಿದೆ, ಈ ನೋವಿನ ನೆರಳಿನಿಂದ ಹೊರಬರುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸುವೆ ಎಂದು ಶಾಸಕ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸರ್ಕಾರ ಕಾಳಜಿ ವಹಿಸಲಿ, ಅಂತೆಯೇ ನತದೃಷ್ಟ ಮಕ್ಕಳ ಕುಟುಂಬಗಳಿಗೆ ಸೂಕ್ತ ಪರಿಹಾರ ಜರೂರಾಗಿ ತಲುಪಲಿ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243