ದಿನದ ಸುದ್ದಿ
ಸಂಸದರ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ | ಶಾಲಾ ಆವರಣಗಳು ಅನೈತಿಕ ತಾಣಗಳಾಗಬಾರದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ ಶಾಲಾ ಆವರಣಗಳು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗದಂತೆ ರಕ್ಷಣೆ ಮಾಡಿಕೊಳ್ಳಬೇಕೆಂದು ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ಆವರಣದಲ್ಲಿ ಎಲ್ಲೆಂದರಲ್ಲಿ ಸಂಜೆಯ ವೇಳೆ ಮದ್ಯದ ಬಾಟಲಿಗಳು ಬಿದ್ದಿರುತ್ತವೆ. ಬೆಳಗ್ಗೆ ಶಾಲೆಗೆ ಆಗಮಿಸುವ ಮಕ್ಕಳು ಇದೆಲ್ಲವನ್ನು ಗಮನಿಸುವುದರಿಂದ ಅವರ ಮೇಲೆ ಪರಿಣಾಮ ಭೀರಲಿದೆ. ಆದ್ದರಿಂದ ಪ್ರತಿ ಶಾಲೆಗೆ ಕಾಂಪೌಂಡ್ ಇರಬೇಕು. ಮತ್ತು ಶಾಲೆಯ ಅಕ್ಕಪಕ್ಕದಲ್ಲಿರುವ ಅಂಗಡಿಗಳಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಭೀರುವ ತಿನಿಸುಗಳು ಮತ್ತು ಇತರೆ ವಸ್ತುಗಳ ಮಾರಾಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕೆಂದರು.
ಗ್ರಾಮಾಂತರ ಪ್ರದೇಶಗಳಿಂದ ಪ್ರೌಢಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಅನಾನುಕೂಲದಿಂದ ಬೆಳಗಿನ ವೇಳೆ ನಡೆಸುವ ವಿಶೇಷ ತರಗತಿಗಳಿಗೆ ಆಗಮಿಸಲು ಸಮಸ್ಯೆ ಎದುರಾಗಿದೆ ಎಂದು ತಿಳಿಸಿದ್ದು ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಡಿಡಿಪಿಐಗೆ ತಿಳಿಸಿದರು.
ಒತ್ತುವರಿ ಕಡಿವಾಣಕ್ಕೆ ಕ್ರಮ : ನಗರ ಹಾಗೂ ಪಟ್ಟಣ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಹಾಗೂ ಚರಂಡಿ ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಾಣ ಮಾಡುವುದು ಕಂಡು ಬಂದಿದ್ದು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾರು ಸಹ ಚರಂಡಿ, ರಸ್ತೆಗಳನ್ನು ಒತ್ತುವರಿ ಮಾಡದಂತೆ ಮನೆ ನಿರ್ಮಾಣ ಮಾಡುವ ವೇಳೆ ಲೈಸೆನ್ಸ್ ನೀಡಬೇಕು. ಉಲ್ಲಂಘನೆ ಮಾಡಿ ನಿರ್ಮಾಣ ಮಾಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕೆಂದರು.
ಓಬಜ್ಜಿಹಳ್ಳಿಯಲ್ಲಿ ರಸ್ತೆಗೆ ಮನೆ ನಿರ್ಮಾಣ ಮಾಡಿದ್ದರಿಂದ ಶವಸಂಸ್ಕಾರ ಮಾಡಲು ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಮನವಿ ಮಾಡಿದ್ದು ಪರಿಶೀಲನೆ ನಡೆಸಲು ತಿಳಿಸಿದರು.
ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಪೈಪ್‍ಲೈನ್ ಅಳವಡಿಸಲು ರಸ್ತೆ ಬಗೆಯುತ್ತಿರುವ ಬಗ್ಗೆ ದಾವಣಗೆರೆ ನಗರದಲ್ಲಿ ಪೈಪ್ ಗ್ಯಾಸ್ ಅಳವಡಿಕೆಗೆ ಹೊಸ ರಸ್ತೆಗಳನ್ನು ತುಂಡರಿಸಲಾಗುತ್ತಿದೆ. ಈ ಬಗ್ಗೆ ನಿಯಮಬದ್ದವಾಗಿ ಮಾಡಲು ಸಂಬಂಧಿಸಿದ ಇಂಜಿನಿಯರ್‍ಗಳು ಪರಿಶೀಲನೆ ನಡೆಸಬೇಕೆಂದರು.
ಎಲ್ಲೆಂದರಲ್ಲಿ ಕಸ ಹಾಕುವುದು ನಿಯಂತ್ರಿಸಿ : ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ಪಟ್ಟಣ, ಗ್ರಾಮಾಂತರ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸ ಹಾಕುವುದನ್ನು ತಡೆಗಟ್ಟುವ ಮೂಲಕ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ಎಲ್ಲೆಂದರಲ್ಲಿ ಕಸ ಹಾಕುವುದನ್ನು ತಡೆಗಟ್ಟಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮನೆಯಲ್ಲಿನ ಹಸಿ-ಒಣ ಕಸ ಸಂಗ್ರಹಣೆ ಮಾಡಲು ವಾಹನಗಳನ್ನು ನೀಡಿದ್ದು ಸರಿಯಾಗಿ ಸಂಗ್ರಹಣೆ ಮಾಡುವ ಮೂಲಕ ಇದರ ವಿಂಗಡಣೆಯನ್ನು ಸಕಾಲದಲ್ಲಿ ಕೈಗೊಂಡು ಅವರಗೆರೆಯಲ್ಲಿ ಘನತ್ಯಾಜ್ಯ ಸಂಗ್ರಹ ಘಟಕದಲ್ಲಿ ಪದೇ ಪದೇ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಈಗಾಗದಂತೆ ವಿಂಗಡಣೆ ಮಾಡಿ ವಿಲೆಗೆ ಕ್ರಮ ವಹಿಸಲು ಸೂಚನೆ ನೀಡಿದರು.
ನಾಯಿಗಳ ಸಂತಾನ ನಿಯಂತ್ರಣಕ್ಕೆ ಕ್ರಮ : ನಾಯಿಗಳ ಹಾವಳಿಯನ್ನು ತಡೆಗಟ್ಟಲು ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ನಾಯಿಗಳ ಸಂತಾನ ನಿಯಂತ್ರಣಕ್ಕಾಗಿ ಎಬಿಸಿ ಚಿಕಿತ್ಸೆ ಮಾಡಿದ್ದು ಗ್ರಾಮಾಂತರ ಪ್ರದೇಶದಲ್ಲಿಯು ಇದನ್ನು ಕೈಗೊಳ್ಳಬೇಕು. ಗ್ರಾಮಾಂತರ ಪ್ರದೇಶದಲ್ಲಿಯು ಇವುಗಳ ನಿಯಂತ್ರಣ ಮಾಡಬೇಕಾಗಿದ್ದು ಆರಂಭಿಕವಾಗಿ ಸಂತೆಬೆನ್ನೂರಿನಲ್ಲಿ ನಾಯಿಗಳ ಸಂತಾನ ನಿಯಂತ್ರಣಕ್ಕಾಗಿ ಎಬಿಸಿ ಶೀಘ್ರದಲ್ಲಿ ಆರಂಭಿಸಲಾಗುತ್ತದೆ ಎಂದರು.
ಕ್ಯಾಂಟೀನ್ ಆರಂಭಿಸಲು ಸಲಹೆ : ಜಿಲ್ಲಾಡಳಿತ ಭವನಕ್ಕೆ ಸಾಕಷ್ಟು ಸಾರ್ವಜನಿಕರು ಆಗಮಿಸುವುದರಿಂದ ಅವರಿಗೆ ಬೇಕಾದ ಉಪಹಾರ, ಊಟ, ಕಾಫಿ, ಟೀ ಯನ್ನು ಪಡೆಯಲು ಗುಣಮಟ್ಟ ಹಾಗೂ ಶುಚಿತ್ವ, ರಿಯಾಯಿತಿ ದರದಲ್ಲಿ ನೀಡಲು ಕ್ಯಾಂಟೀನ್ ಆರಂಭಿಸಬೇಕೆಂದು ಸಂಸದರು ಸಲಹೆ ನೀಡಿದರು. ಈ ವೇಳೆ ಶೀಘ್ರದಲ್ಲಿಯೇ ಆರಂಭಿಸಲಾಗುತ್ತದೆ ಎಂದು ಎಡಿಸಿ ತಿಳಿಸಿದರು.
ಸಭೆಯಲ್ಲಿ ಹೊನ್ನಾಳಿ ಶಾಸಕರಾದ ಶಾಂತನಗೌಡ ಡಿ.ಜಿ., ಮೇಯರ್ ಚಮನ್‍ಸಾಬ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


