ದಿನದ ಸುದ್ದಿ
ಚನ್ನಗಿರಿ | ಮಾರ್ಚ್ 27 ರಂದು ಯರಗಟ್ಟಿಹಳ್ಳಿ ಪ್ರಾಥಮಿಕ ಶಾಲೆಯ ಕೊಠಡಿಗಳ ಉದ್ಘಾಟನೆ ಮತ್ತು ಗುರುವಂದನಾ ಕಾರ್ಯಕ್ರಮ
ಸುದ್ದಿದಿನ,ಚನ್ನಗಿರಿ : ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಯರಗಟ್ಟಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಳೆಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಮಾರ್ಚ್ 27 ನೇ ತಾರೀಖು ಭಾನುವಾರ ಹಮ್ಮಿಕೊಳ್ಳಲಾಗಿದೆ.
ಕೊಠಡಿಗಳ ಉದ್ಘಾಟನೆಯನ್ನು ಚನ್ನಗಿರಿ ಶಾಸಕರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಅಂದು ಮದ್ಯಾಹ್ನ 1 ಗಂಟೆಗೆ ಮಾಡಲಿದ್ದಾರೆ.
ಗುರುವಂದನಾ ಕಾರ್ಯಕ್ರಮ
ಹಳೆಯ ವಿದ್ಯಾರ್ಥಿಗಳ ಸಮಾಗಮ ಹಾಗೂ “ಗುರುವಂದನಾ” ಕಾರ್ಯಕ್ರಮ ಶಾಲಾ ಆವರಣದಲ್ಲಿ ಅಂದು ಸಂಜೆ 4ಕ್ಕೆ ನಡೆಲಿದೆ. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243