ದಿನದ ಸುದ್ದಿ
ಸೆ.30 ರವರೆಗೆ ಶಾಲಾ-ಕಾಲೇಜುಗಳು ಬಂದ್
ಸುದ್ದಿದಿನ, ಬೆಂಗಳೂರು :ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 30ರವರೆಗೆ ಸ್ಕೂಲ್, ಕಾಲೇಜು ಆರಂಭಕ್ಕೆ ಅವಕಾಶ ನೀಡಿಲ್ಲ. ಆನ್ಲೈನ್ ಶಿಕ್ಷಣ ಮುಂದುವರಿಕೆಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 7ರಿಂದ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಥಿಯೇಟರ್, ಸ್ವಿಮ್ಮಿಂಗ್ ಪೂಲ್ ಗೆ ಅನುಮತಿ ನೀಡಿಲ್ಲ. ಮಲ್ಟಿಫ್ಲೆಕ್ಸ್, ಮನರಂಜನಾ ಪಾರ್ಕ್ ಗಳು ಬಂದ್ ಆಗಿರಲಿವೆ. ಸೆ.30ರವರೆಗೆ ಯಾವುದೂ ತೆರೆಯದಂತೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243