ದಿನದ ಸುದ್ದಿ
ಸ್ಕಾರ್ಪಿನ್ ಶ್ರೇಣಿಯ ಜಲಾಂತರ್ಗಾಮಿ ನೌಕೆ ಐಎನ್ಎಸ್ ವಾಗ್ಶೀರ್ ಕಾರ್ಯಾಚರಣೆಗೆ ನಿಯುಕ್ತಿ
ಸುದ್ದಿದಿನ ಡೆಸ್ಕ್ : ಸ್ಕಾರ್ಪಿನ್ ಶ್ರೇಣಿಯ 6ನೇ ಮತ್ತು ಕೊನೆಯ ಜಲಾಂತರ್ಗಾಮಿ ನೌಕೆ ಐಎನ್ಎಸ್ ವಾಗ್ಶೀರ್ ಅನ್ನು ಮುಂಬೈನಲ್ಲಿ ಬುಧವಾರ ಕಾರ್ಯಾಚರಣೆಗೆ ಬಿಡುಗಡೆ ಮಾಡಲಾಯಿತು.
ಮುಂಬೈ ಮೂಲದ ಮಝಗಾನ್ ಡಾಕ್ ಶಿಪ್ ಬಿರ್ಲ್ಡಸ್ ಕಂಪನಿಯು ಮೇಕ್ ಇನ್ ಇಂಡಿಯಾ ಉಪಕ್ರಮದಡಿ ಈ ಜಲಾಂತರ್ಗಾಮಿ ನೌಕೆಯನ್ನು ಅಭಿವೃದ್ಧಿಪಡಿಸಿದೆ.
ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ರಕ್ಷಣಾ ಕಾರ್ಯದರ್ಶಿ ಅಜಯ್ಕುಮಾರ್ ಮಾತನಾಡಿ, ಆತ್ಮನಿರ್ಭರ್ ಭಾರತ ಆಂದೋಲನಕ್ಕೆ ಜಲಾಂತರ್ಗಾಮಿ ನೌಕೆಯೇ ಸೂಕ್ತ ಉದಾಹರಣೆಯಾಗಿದೆ. ಸಾಗರೋತ್ತರ ನೌಕೆಗಳು ಮತ್ತು ಸಾಧನಗಳ ದೇಶೀಯ ನಿರ್ಮಾಣದಲ್ಲಿ ಮಝಗಾನ್ ಕಂಪನಿ ಬಹುದೊಡ್ಡ ಪಾತ್ರವಹಿಸುತ್ತಿದೆ ಎಂದು ಶ್ಲಾಘಿಸಿದರು.
ಐಎನ್ಎಸ್ ವಾಗ್ಶೀರ್ ಕುರಿತು ಹೇಳಿಕೆ ನೀಡಿರುವ ಮಝಗಾನ್ ಕಂಪನಿ, ನೌಕೆಯನ್ನು ಕಠಿಣ ಪರೀಕ್ಷೆ ಮತ್ತು ಪ್ರಯೋಗಗಳಿಗೆ ಒಳಪಡಿಸಲಾಗುತ್ತದೆ. ಸಮರ ಯೋಗ್ಯ ಪ್ರಯೋಗಗಳು ನಡೆಯಲಿವೆ. ಶತ್ರು ನೌಕೆಗಳ ಮೇಲೆ ನಿಖರ ಗುರಿಯಾಗಿಸಿ ದಾಳಿ ಮಾಡುವ ಶಸ್ತ್ರಾಸ್ತ್ರಗಳನ್ನು ನೌಕೆಗೆ ಅಳವಡಿಸಲಾಗಿದೆ. ಸಾಗರ ಭಾಗದಲ್ಲಿ ಎಲ್ಲ ರೀತಿಯ ಕಾರ್ಯಾಚರಣೆಗೆ ಈ ನೌಕೆಯನ್ನು ಅಣಿಗೊಳಿಸಲಾಗಿದೆ ಎಂದು ಕಂಪನಿ ತಿಳಿಸಿದೆ.
Mazagon Dock Shipbuilders Ltd. launches 6th & final submarine of Project 75, Vagsheer in #Mumbai
Defence Secretary, Ajay Kumar, Vice Admiral, A B Singh, Naval Officers attend the event
MDL is India’s leading Defence public sector undertaking shipyards under @DefenceMinIndia pic.twitter.com/ICTKsb67RX
— PIB in Maharashtra 🇮🇳 (@PIBMumbai) April 20, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

