ದಿನದ ಸುದ್ದಿ

ಚಂದನ ವಾಹಿನಿಯಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಅರಿವು ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ದಿಗಾಗಿ ಅನುಷ್ಟಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಾಯೋಜಿತ ಕಾರ್ಯಕ್ರಮಗಳು ಮಾ.8 ರಿಂದ ಪ್ರತಿ ಸೋಮವಾರದಿಂದ ಗುರುವಾರದವರೆಗೆ ರಾತ್ರಿ 7.30 ರಿಂದ 8.30 ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ ಪ್ರಾಯೋಜಿತ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ನಡೆಸಿಕೊಡಲಿದ್ದು, ಸಾರ್ವಜನಿಕರು ಈ ಕಾರ್ಯಕ್ರಮಗಳನ್ನು ವೀಕ್ಷಿಸಬೇಕೆಂದು ಡಾ.ಬಾಬು ಜಗಜೀವನಂ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version