ದಿನದ ಸುದ್ದಿ
ದಾವಣಗೆರೆ | ಸೀಲ್‍ಡೌನ್ ಪ್ರದೇಶದ ಜನತೆಯ ಮನೆಗೆ ಪಡಿತರ ವಿತರಣೆ ; ಯಾರೂ ಹೊರಗೆ ಬರೋ ಹಾಗಿಲ್ಲ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/Davangere_Commander_suddidina.jpg&description=ದಾವಣಗೆರೆ | ಸೀಲ್‍ಡೌನ್ ಪ್ರದೇಶದ ಜನತೆಯ ಮನೆಗೆ ಪಡಿತರ ವಿತರಣೆ ; ಯಾರೂ ಹೊರಗೆ ಬರೋ ಹಾಗಿಲ್ಲ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/Davangere_Commander_suddidina.jpg&description=ದಾವಣಗೆರೆ | ಸೀಲ್‍ಡೌನ್ ಪ್ರದೇಶದ ಜನತೆಯ ಮನೆಗೆ ಪಡಿತರ ವಿತರಣೆ ; ಯಾರೂ ಹೊರಗೆ ಬರೋ ಹಾಗಿಲ್ಲ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ನಿಜಲಿಂಗಪ್ಪ ಲೇಔಟ್ ಕೊವೀಡ್-19 ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರ್ರಿತ ಪ್ರದೇಶ ಎಂದು ಗುರುತಿಸಿ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರನ್ನು ಘಟಕ ನಿಯಂತ್ರಕರಾಗಿ (ಕಮಾಂಡರ್) ನಿಯೋಜನೆ ಮಾಡಲಾಗಿದೆ.
ಸೋಮವಾರ ದಾವಣಗೆರೆಯ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಘಟನಾ ಕಮಾಂಡರ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನಿಯಂತ್ರಣ ವಲಯಕ್ಕೆ ಸಂಬಂದಿಸಿದಂತೆ ಯಾವರೀತಿ ಸಂಪೂರ್ಣ ಸೀಲ್‍ಡೌನ್ ನಿಯಮಾವಳಿಗಳನ್ನು ಅನುಸರಿಸಬೇಕು ಎಂಬವುದರ ಕುರಿತು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಸಿಟಿವ್ ಪ್ರಕರಣ ಹೊಂದಿರುವ ಜಿಲ್ಲೆಗಳಲ್ಲಿ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗದಿರುವ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಈ ನಿಯಂತ್ರಿತ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಪಾತ್ರ ಕುರಿತು ಯಾವರೀತಿ ಕಟ್ಟುನಿಟಿನ ಕ್ರಮಗಳನ್ನು ಕೈಗೊಳ್ಳಬೇಕು ಹೇಗೆ ನಿಯಂತ್ರಿಸಬೇಕು ಎಂದು ಚರ್ಚಿಸಿ, ಸೂಚನೆಗಳನ್ನು ನೀಡಿದರು.
ಪೊಲೀಸ್ ಇಲಾಖೆ : ನಿಯಂತ್ರಿತ ವಲಯದ ಎಲ್ಲಾ ಪ್ರವೇಶ ದ್ವಾರಗಳನ್ನು ಶಾಶ್ವತವಾಗಿ ತೆಡೆಗೋಡೆ ಹಾಕುವ ಮೂಲಕ ಪೊಲೀಸ್ ನಾಕಾಬಂಧಿ ಮಾಡಬೇಕು. ನಿಯಂತ್ರಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ವಿವಿಧ ಉದ್ದೇಶಗಳಿಂದ ಮನೆಯಿಂದ ಹೊರೆಗೆ ಬರಲು ಅವಕಾಶ ನೀಡಬಾರದು ಪ್ರತಿಯೊಂದು ವಲಯದಲ್ಲಿ ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರವಿರಬೇಕು. ನಿಯಂತ್ರಿತ ವಲಯದ ಒಳಗೆ ಮತ್ತು ಹೊರಗೆ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದು ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಆಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಮತ್ತು ಅಗತ್ಯ ಸೇವೆಗಳು, ವೈದ್ಯಕೀಯ ತುರ್ತು ಸಂದರ್ಭಗಳಿಗೆ ಪೊಲೀಸ್ ಎಮರ್ಜೆನ್ಸಿ ಪಾಸ್‍ಗಳನ್ನು ನೀಡುವುದು. ನಿಯಂತ್ರಿತ ವಲಯದಲ್ಲಿ ಸಂಪೂರ್ಣ ಲಾಕ್‍ಡೌನ್ ಖಾತರಿ ಪಡಿಸಲು ಡ್ರೋನ್‍ಗಳನ್ನು ಬಳಸಬೇಕು ಎಂದರು.
ಆರೋಗ್ಯ ಇಲಾಖೆ : ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಜಂಟಿಯಗಿ ಮತ್ತು ಮುನ್ನೆಚ್ಚರಿಕೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ನಿಯಂತ್ರಿತ ವಲಯದಲ್ಲಿ ಆರೋಗ್ಯ ಔಟ್ ಪೋಸ್ಟ್ ಆರಂಭಿಸಿ ಓರ್ವ ವ್ಯೆದ್ಯ ಹಾಗೂ ಸತತ ಐಇಸಿ ಪ್ರಚಾರದ ಜೊತೆಗೆ ದಿನಕ್ಕೆ ಎರಡು ಭಾರಿ ಜನಸಂಪರ್ಕಗಳ ಪತ್ತೆ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು.
ಜನಸಂಪರ್ಕ ನಿಗಾ ಪತ್ತೆ ಕಾರ್ಯವನ್ನು ಶಿಷ್ಠಾಚಾರದ ನಿಯಮಗಳ ಪ್ರಕಾರ ನಡೆಸಬೇಕು ಹೆಚ್ಚಿನ ರಿಸ್ಕ್ ಸಂಪರ್ಕದ ವ್ಯಕ್ತಿಗಳನ್ನು ತಕ್ಷಣವೇ ಸಾಂಸ್ಥಿಕ ದಿಗ್ಬಂದನ ಕೇಂದ್ರಕ್ಕೆ ರವಾನಿಸುವ ಹಾಗೂ ಕಡಿಮೆ ಸಂಪರ್ಕದ ವ್ಯಕ್ತಿಗಳನ್ನು ಗೃಹ ದಿಗ್ಬಂದನಕ್ಕೆ ಒಳಪಡಿಸಬೇಕು ಅಧಿಕ ಅಪಾಯ ಮತ್ತು ಕಡಿಮೆ ಅಪಾಯವಿರುವ ವ್ಯಕ್ತಿಗಳಿಂದ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುವ ಹೊಣೆಗಾರಿಕೆ ಆರೋಗ್ಯ ಇಲಾಖೆ ತಂಡದ್ದಾಗಿರುತ್ತದೆ. ಈ ನಿಟ್ಟಿನಲ್ಲಿ ಇಲಾಖೆಗಳು ಕ್ರಮ ವಹಿಸಬೇಕು ಎಂದರು.
ಮಹಾನಗರಪಾಲಿಕೆ : ನೈರ್ಮಲಿಕರಣದ ನಿರ್ವಹಣೆ ಮಾಡುವುದು ಪ್ರತಿದಿನವೂ ಘನತ್ಯಾಜ್ಯ ನಿರ್ವಹಣೆ ಮತ್ತು ಸೋಂಕು ನಿವಾರಣೆ ಮಾಡುವ ಕೆಲಸವನ್ನು ನಿರ್ವಹಿಸತಕ್ಕದ್ದು ಮತ್ತು ಕುಡಿಯುವ ನೀರಿನ ಸರಬರಾಜು ಮಾಡುವ ಕೆಲಸವನ್ನು ಮಾಡಬೇಕು ಅಗತ್ಯವಿರುವವರಿಗೆ ಆಹಾರ ಪೊಟ್ಟಣಗಳು ಮತ್ತು ಪಡಿತರವನ್ನು ಒದಗಿಸುವುದು ಮತ್ತು ಕಾರ್ಯನಿರ್ವಹಿಸಲು ಸರ್ಕಾರಿ ಗುರುತಿನ ಪತ್ರಗಳನ್ನು ಸಿಬ್ಬಂದಿಗೆ ನೀಡಬೇಕು. ಇವರನ್ನು ಹೊರತು ಪಡಿಸಿ ಬೇರೆಯವರಿಗೆ ಪ್ರವೇಶವನ್ನು ನಿರ್ಭಂದಿಸಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆ : ನಿಯಂತ್ರಿತ ವಲಯವನ್ನು ಸಂಪೂರ್ಣ ಸೀಲ್ ಮಾಡುವುದರರಿಂದ ಜನ ಮನೆಗಳಿಂದ ಯಾವ ಕಾರಣಕ್ಕೂ ಹೊರಗೆ ಬರುವಂತಿಲ್ಲ ಹಾಗೂ ಜನರಿಗೆ ಅಗತ್ಯ ವಸ್ತು ದಿನಸಿ ಪದಾರ್ಥಗಳು ಮಾಂಸ ಹಾಲು ಎಲ್.ಪಿ.ಜಿ. ಅನಿಲ ಔಷಧಿಗಳನ್ನು ಪೂರೈಸುವವರಿಗೆ ಪಾಸ್ ಕೊಡಬೇಕು ಅಗತ್ಯ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನಿಗಾವಹಿಸಬೇಕು ಮತ್ತು ಪಡಿತರ ಚೀಟಿ ಹೊಂದಿರುವವರಿಗೆ ನ್ಯಾಯಬೆಲೆ ಅಂಗಡಿಗಳು ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದ ವೈದ್ಯರಾದ ಡಾ.ವೆಂಕಟೇಶ್, ಡಾ.ನಾಗರಾಜ್, ಡಾ. ಸುಧೀಂದ್ರ ಮಹಾನಗರ ಪಾಲಿಕೆ ಆರೋಗ್ಯ ನೀಕ್ಷಕರಾದ ರಾಜಪ್ಪ, ಮದುಶ್ರೀ, ಬಡಾವಣೆ ಪೊಲೀಸ್ ಠಾಣೆ ಎ.ಎಸ್.ಐ ಮಂಜುನಾಥ ಸ್ವಾಮಿ, ಕಂದಾಯ ಇಲಾಖೆ ಸಿಬ್ಬಂದಿ ಮಂಜುನಾಥ ಡಿ, ಅಂಜನಪ್ಪ ಮತ್ತು ಉಪೇಂದ್ರ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ14 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

