Connect with us

ದಿನದ ಸುದ್ದಿ

ವಿಂಟೇಜ್ ಕಾರುಗಳ ಒಡೆಯ ಕುಟ್ಟಿ ಹಾಜಿ ಬಗ್ಗೆ ನಿಮಗೆ ಗೊತ್ತಿರದ ಸತ್ಯಗಳು

Published

on

ಸುದ್ದಿ ದಿನ ಡೆಸ್ಕ್: ನೂರಾರು ವಿಂಟೇಜ್ ಕಾರುಗಳ ಒಡೆಯ ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ ಮೂಲದ ಪಿ.ಸಿ. ಅಹಮ್ಮದ್ ಕುಟ್ಟಿ ಹಾಜಿ ಶನಿವಾರ ಸಾವಿಗೀಡಾದರು. ತೋಟದಲ್ಲಿ ಮರದ ಕೊಂಬೆಯೊಂದು ತಲೆ ಮೇಲೆ ಬಿದ್ದು, ಚಿಕಿತ್ಸಾ ವೈಫಲ್ಯದಿಂದ ಅವರು ಕೊನೆಯಿಸಿರೆಳೆದರು. ಹಾಜಿ ಅವರ ಬಗ್ಗೆ ನಿಮಗೆ ಗೊತ್ತಿರದ ಸತ್ಯಗಳು ಇಲ್ಲಿವೆ.

  • ಕುಟ್ಟಿ ಹಾಜಿ ಅವರು ಮೂಲತಃ ಕೇರಳದ ಕಣ್ಣೂರು ಜಿಲ್ಲೆಯವರು.
  •  ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್, ಹಾಜಿ ಅವರ ಸಹೋದರ.
  •  ನೂರಾರು ಕ್ಲಾಸಿಕ್ ಅಥವಾ ವಿಂಟೇಜ್ ಕಾರುಗಳನ್ನು ಸಂಗ್ರಹಿಸಿ ಅಭಿಮಾನಿಗಳನ್ನು ಸಂಪಾದಿಸಿದ್ದ ಹಾಜಿ.
  • ಸಾಕಷ್ಟು ವರ್ಷಗಳಿಂದ ವಿಂಟೇಜ್ ಕಾರುಗಳನ್ನು ಸಂಗ್ರಹಿಸುವ ಹವ್ಯಾಸ.
  •  ಬ್ರಿಟಿಷರ ಕಾರುಗಳಿಂದ ಹಿಡಿದು ವಿದೇಶಿ ಕಾರುಗಳ ವರೆಗೆ ಸಂಗ್ರಹ ಮಾಡಿದ್ದರು.
  •  ಇವರ ಮನೆ ಮುಂದೆ ಇರುವ ಕಾರು ಸಂಗ್ರಹಾಲಯ ನೋಡಲು ವಿದೇಶದಿಂದಲೂ ಬರುತ್ತಿದ್ದ ಜನ.
  • ತಮ್ಮಲ್ಲಿದ್ದ ಎಲ್ಲ ಕಾರುಗಳ ಬಗ್ಗೆ ಮಾಹಿತಿ ನೀಡುತ್ತಿದ್ದ ಹಾಜಿ.
  • ಇವರ ಬಳಿ ಇದ್ದ ಎಲ್ಲ ಕಾರುಗಳು ರನ್ನಿಂಗ್ ಕಂಡಿಶನ್ ನಲ್ಲಿದ್ದವು.
  • ಕೆಲವೊಮ್ಮೆ ಇವುಗಳ ಮೆರವಣಿಗೆ ಕೂಡ ನಡೆಸುತ್ತಿದ್ದರು.
  • ಕಾರುಗಳ ವೀಕ್ಷಣೆಗೆ ಸ್ಥಳೀಯರು ಮತ್ತು ವಿದ್ಯಾರ್ಥಿಗಳಿಗೆ ಉಚಿತವಾಗಿ ಅವಕಾಶ ಕೊಟ್ಟಿದ್ದರು.
  • ಸೋಮವಾರಪೇಟೆ ತಾಲೂಕು ನೆಲ್ಲಿಹುದಿಕೇರಿಯ ಮುಬಾರಕ್ ಎಸ್ಟೇಟ್ ಕಾಫಿ ತೋಟದಲ್ಲಿ  ಶೆಡ್‌ವೊಂದನ್ನು  ನಿರ್ಮಿಸಿ ಅಲ್ಲಿಯೇ ತಾವು ಸಂಗ್ರಹಿಸಿದ್ದ ಪುರಾತನ, ಅಪರೂಪದ ನೂರಾರು ವಿಂಟೇಜ್ ಕಾರುಗಳನ್ನು ಪ್ರದರ್ಶನಕ್ಕಿಟ್ಟಿದ್ದರು.
  • ಇವರ ಸಂಗ್ರಹದಲ್ಲಿ  ಕಾರುಗಳು ಮಾತ್ರವಲ್ಲದೆ ಹಳೆ ಕಾಲದ ಮೋಟಾರ್ ಬೈಕ್, ಸೈಕಲ್‌ಗಳು, ಎತ್ತಿನ ಗಾಡಿ, ಸಿನಿಮಾ ಪ್ರೊಜೆಕ್ಟರ್‌ಗಳು, ಗಡಿಯಾರ, ಮ್ಯೂಸಿಕ್ ಪ್ಲೇಯರ್, ರೇಡಿಯೋಗಳಿದ್ದವು.
  • ರಾಜ್ಯದಲ್ಲೇ ಇವರಷ್ಟು ಹೆಚ್ಚು  ಕಾರುಗಳ ಸಂಗ್ರಹ ಯಾರ ಬಳಿಯೂ ಇಲ್ಲ. ದೇಶ, ವಿದೇಶಗಳ ಮಾಧ್ಯಮಗಳು ಇವರ ಬಳಿ ಇದ್ದ ಕಾರುಗಳ ಸಂಗ್ರಹದ ಬಗ್ಗೆ ಲೇಖನ, ವರದಿಗಳನ್ನು ಪ್ರಕಟಿಸಿವೆ.
  • ಶ್ರೀಮಂತರಾಗಿದ್ದರೂ ಸರಳ, ಸಜ್ಜನರಾಗಿದ್ದರು.
  • ಸಿದ್ದಾಪುರ ಮುಸ್ಲಿಂ ಜಮಾಅತ್ ಕಮಿಟಿಯಲ್ಲಿ  ಉಪಾಧ್ಯಕ್ಷರಾಗಿದ್ದರು. ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು.
  •  ಪ್ರತಿ ವರ್ಷ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಳೆಯ ಕಾರುಗಳ ಸಂಗ್ರಹದ ಬಗ್ಗೆ  ಮಾಹಿತಿ ನೀಡುತ್ತಿದ್ದರು.
Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ1 day ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ2 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ3 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ3 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ4 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ4 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ1 week ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ1 week ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ1 week ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending