ಅಂಕಣ
ಮಾನಸಿಕ ಆರೋಗ್ಯದ ಗುಟ್ಟುಗಳು ಮತ್ತು ಗುರಿ ಸಾಧನೆಯ ದಾರಿಗಳು..!

ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಪರಿಣಾಮಕಾರಿ ಟಿಪ್ಸ್ ಇಲ್ಲಿವೆ:
1. ನಿಯಮಿತ ವ್ಯಾಯಾಮ: ದೈಹಿಕ ಚಟುವಟಿಕೆಗಳಾದ ಯೋಗ, ವಾಕಿಂಗ್ ಅಥವಾ ಜಿಮ್‌ನಿಂದ ಒತ್ತಡ ಕಡಿಮೆಯಾಗಿ, ಎಂಡಾರ್ಫಿನ್‌ಗಳು ಬಿಡುಗಡೆಯಾಗುತ್ತವೆ, ಇದು ಮನಸ್ಸಿಗೆ ಉಲ್ಲಾಸ ನೀಡುತ್ತದೆ.
2.ಸಾಕಷ್ಟು ನಿದ್ರೆ: ರಾತ್ರಿ 7-8 ಗಂಟೆ ಗುಣಮಟ್ಟದ ನಿದ್ರೆ ಪಡೆಯಿರಿ. ನಿದ್ರೆಯ ಕೊರತೆ ಮಾನಸಿಕ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ.
3.ಆರೋಗ್ಯಕರ ಆಹಾರ: ಸಮತೋಲಿತ ಆಹಾರವನ್ನು ಸೇವಿಸಿ. ಒಮೆಗಾ-3 ಕೊಬ್ಬುಗಳು, ವಿಟಮಿನ್‌ಗಳು ಮತ್ತು ಖನಿಜಗಳಿರುವ ಆಹಾರ (ಹಣ್ಣು, ತರಕಾರಿಗಳು, ಒಣಗಿದ ಹಣ್ಣುಗಳು) ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು.
4.ಧ್ಯಾನ ಮತ್ತು ಚಿತ್ತಸ್ಥೈರ್ಯ: ಪ್ರತಿದಿನ 10-15 ನಿಮಿಷ ಧ್ಯಾನ, ಯೋಗ ಅಥವಾ ಡೀಪ್ ಬ್ರೀದಿಂಗ್ ಅಭ್ಯಾಸ ಮಾಡಿ. ಇದು ಒತ್ತಡವನ್ನು ಕಡಿಮೆ ಮಾಡಿ, ಗಮನವನ್ನು ಹೆಚ್ಚಿಸುತ್ತದೆ.
5.ಸಾಮಾಜಿಕ ಸಂಪರ್ಕ: ಕುಟುಂಬ, ಸ್ನೇಹಿತರೊಂದಿಗೆ ಸಂವಾದ ನಡೆಸಿ. ಒಂಟಿತನವನ್ನು ತಪ್ಪಿಸಲು ಒಳ್ಳೆಯ ಸಂಬಂಧಗಳನ್ನು ಕಾಪಾಡಿಕೊಳ್ಳಿ.
6. ಸಮಯದ ನಿರ್ವಹಣೆ: ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳಿ. ಒತ್ತಡವನ್ನು ಕಡಿಮೆ ಮಾಡಲು ಕೆಲಸಗಳಿಗೆ ಆದ್ಯತೆ ನೀಡಿ.
7. ಹವ್ಯಾಸಗಳಿಗೆ ಸಮಯ: ನಿಮಗೆ ಖುಷಿ ಕೊಡುವ ಚಟುವಟಿಕೆಗಳಾದ ಓದುವಿಕೆ, ಚಿತ್ರಕಲೆ, ಸಂಗೀತ ಅಥವಾ ತೋಟಗಾರಿಕೆಯಂತಹ ಹವ್ಯಾಸಗಳಿಗೆ ಸಮಯ ಮೀಸಲಿಡಿ.
8. ನಕಾರಾತ್ಮಕ ಚಿಂತನೆಯಿಂದ ದೂರ: ಸಕಾರಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ. ಕೃತಜ್ಞತೆಯ ಡೈರಿಯನ್ನು ಬರೆಯುವುದು ಅಥವಾ ಒಳ್ಳೆಯ ವಿಷಯಗಳ ಮೇಲೆ ಕೇಂದ್ರೀಕರಿಸುವುದು ಸಹಾಯಕವಾಗುತ್ತದೆ.
9. ಪರದೆಯ ಸಮಯ ಕಡಿಮೆ ಮಾಡಿ: ಮೊಬೈಲ್, ಕಂಪ್ಯೂಟರ್‌ನ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ, ವಿಶೇಷವಾಗಿ ರಾತ್ರಿಯ ಸಮಯದಲ್ಲಿ.
10. ವೃತ್ತಿಪರ ಸಹಾಯ: ಒತ್ತಡ, ಆತಂಕ ಅಥವಾ ಖಿನ್ನತೆಯ ಲಕ್ಷಣಗಳು ತೀವ್ರವಾದರೆ, ಮನಶ್ಶಾಸ್ತ್ರಜ್ಞ ಅಥವಾ ಕೌನ್ಸೆಲರ್‌ನ ಸಹಾಯ ಪಡೆಯಿರಿ. ನಿಮ್ಮ ಮಾನಸಿಕ ಆರೋಗ್ಯದ ಆರೈಕೆಯೇ ಒಟ್ಟಾರೆ ಯಶಸ್ಸಿನ ಮೂಲಾಧಾರ.
ಗುರಿ ಸಾಧನೆಯ ದಾರಿಗಳು
ಯಶಸ್ಸಿನ ಗುರಿಯನ್ನು ಸಾಧಿಸಲು ಲೈಫ್‌ಸ್ಟೈಲ್‌ನಲ್ಲಿ ಕೆಲವು ಪ್ರಮುಖ ಅಂಶಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಒಂದು ಶಿಸ್ತುಬದ್ಧ, ಸಕಾರಾತ್ಮಕ ಮತ್ತು ಗುರಿಮುಖಿ ಜೀವನಶೈಲಿ ಯಶಸ್ಸಿನ ದಾರಿಯನ್ನು ಸುಗಮಗೊಳಿಸುತ್ತದೆ. ಈ ಕೆಳಗಿನ ಅಂಶಗಳು ಯಶಸ್ಸಿಗೆ ಸಹಾಯಕವಾಗಬಹುದು:
1. ಗುರಿ ಸ್ಪಷ್ಟತೆ: ನಿಮ್ಮ ಗುರಿಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿ. ಏನನ್ನು ಸಾಧಿಸಲು ಬಯಸುತ್ತೀರಿ? ದೀರ್ಘಕಾಲೀನ ಮತ್ತು ಸ್ವಲ್ಪಕಾಲೀನ ಗುರಿಗಳನ್ನು ಬರೆದಿಟ್ಟುಕೊಳ್ಳಿ.
2. ಶಿಸ್ತು ಮತ್ತು ಸಮಯದ ನಿರ್ವಹಣೆ: ಪ್ರತಿದಿನದ ಕೆಲಸಗಳಿಗೆ ಸಮಯವನ್ನು ಯೋಜನಾಬದ್ಧವಾಗಿ ವಿಂಗಡಿಸಿ. ಸಮಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.
3. ನಿರಂತರ ಕಲಿಕೆ: ಹೊಸ ಕೌಶಲ್ಯಗಳನ್ನು ಕಲಿಯಿರಿ ಮತ್ತು ಜ್ಞಾನವನ್ನು ನವೀಕರಿಸಿಕೊಳ್ಳಿ. ಓದುವಿಕೆ, ಕೋರ್ಸ್‌ಗಳು ಅಥವಾ ಕಾರ್ಯಾಗಾರಗಳ ಮೂಲಕ ಸ್ವಯಂ-ಅಭಿವೃದ್ಧಿಗೆ ಒತ್ತು ಕೊಡಿ.
4. ಆರೋಗ್ಯಕರ ಜೀವನಶೈಲಿ: ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ಮಾನಸಿಕ ಆರೋಗ್ಯದ ಕಡೆ ಗಮನ ಕೊಡಿ. ಆರೋಗ್ಯವೇ ಯಶಸ್ಸಿನ ಮೂಲಾಧಾರ.
5. ಸಕಾರಾತ್ಮಕ ಮನಸ್ಥಿತಿ: ವಿಫಲತೆಗಳನ್ನು ಕಲಿಕೆಯ ಅವಕಾಶವಾಗಿ ಒಪ್ಪಿಕೊಳ್ಳಿ. ಸಕಾರಾತ್ಮಕ ಚಿಂತನೆ ಮತ್ತು ಸ್ಥಿರತೆಯಿಂದ ಸವಾಲುಗಳನ್ನು ಎದುರಿಸಿ.
6. ನೆಟ್‌ವರ್ಕಿಂಗ್: ಸಕಾರಾತ್ಮಕ ಮತ್ತು ಪ್ರೇರಣಾದಾಯಕ ಜನರೊಂದಿಗೆ ಸಂಪರ್ಕದಲ್ಲಿರಿ. ಒಳ್ಳೆಯ ಸಂಬಂಧಗಳು ನಿಮ್ಮ ಗುರಿಗಳಿಗೆ ಬೆಂಬಲ ನೀಡುತ್ತವೆ.
7. ಕ್ರಿಯಾಶೀಲತೆ: ಯೋಜನೆಗಳನ್ನು ಕಾರ್ಯಗತಗೊಳಿಸಲು ಧೈರ್ಯ ಮತ್ತು ಉತ್ಸಾಹದಿಂದ ಕೆಲಸ ಮಾಡಿ. ವಿಳಂಬವನ್ನು ತಪ್ಪಿಸಿ.
8. ಸ್ವಯಂ-ಪ್ರತಿಫಲನ: ನಿಮ್ಮ ಪ್ರಗತಿಯನ್ನು ನಿಯಮಿತವಾಗಿ ಮೌಲ್ಯಮಾಪನ ಮಾಡಿಕೊಳ್ಳಿ. ತಪ್ಪುಗಳಿಂದ ಕಲಿಯಿರಿ ಮತ್ತು ಸುಧಾರಣೆಗೆ ಒತ್ತು ಕೊಡಿ.
ಈ ಜೀವನಶೈಲಿಯ ಅಂಶಗಳನ್ನು ಅಳವಡಿಸಿಕೊಂಡರೆ, ಯಶಸ್ಸು ಖಂಡಿತವಾಗಿಯೂ ಸಾಧ್ಯವಾಗುತ್ತದೆ. ಆದರೆ, ಯಶಸ್ಸಿನ ಪಯಣವು ತಾಳ್ಮೆ, ಸ್ಥಿರತೆ ಮತ್ತು ಸತತ ಪ್ರಯತ್ನವನ್ನು ಒಳಗೊಂಡಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಮೌನಾಮೃತ

~ ತಾರಾ ಸಂತೋಷ್ ಮೇರವಾಡೆ (ಕಾವ್ಯಾಗ್ನಿ), ಗಂಗಾವತಿ
ಅದೆಷ್ಟೋ ಬಗೆಹರಿಯದ
ಸಮಸ್ಯೆಗಳಿಗೆ
ಮೌನಾಮೃತವ
ಸಿಂಪಡಿಸಿ ಸುಮ್ಮನಾಗಿಬಿಡು.
ಅರ್ಥವಿರದ
ವ್ಯರ್ಥ ವಾಗ್ವಾದಗಳಿಗೆ
ಮೌನದ ಪೂರ್ಣವಿರಾಮವನಿಟ್ಟು
ಹೊರಟುಬಿಡು.
ಮಾತಾಡಿ
ಕಿರುಚಾಡಿ
ರಮಟರಾಡಿ ಮಾಡುವ ಬದಲು
ಒಂದರೆಗಳಿಗೆ
ಮೌನದ ಮೊರೆಹೋಗಿ ನೋಡು.
ಅದೆಷ್ಟೋ ಮುಗಿಯದ
ಮನದ ತೊಳಲಾಟಗಳಿಗೆ
ಮೌನವೆಂಬ ಉತ್ತರವುಂಟು
ಅದನ್ನಪ್ಪಿ ಮನಕ್ಕೊಂದಿಷ್ಟು
ಶಾಂತಿಯ ನೀಡಿ ನಕ್ಕುಬಿಡು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅವ ಸುಡುತ್ತಾನೆ

~ ಶೃತಿ ಮಧುಸೂದನ (ರುದ್ರಾಗ್ನಿ)
ಅವ ಸುಡುತ್ತಾನೆ…
ಅವ ಸಂಪ್ರದಾದಯವ
ಸೆರಗ ನನಗುಡಿಸಿ
ನಗುತ್ತಾನೆ…
ಅವ ಅತ್ತಿಂದತ್ತ
ಅಲೆದಾಡುವ
ಮುಂಗುರುಳ
ಮುದ್ದಿಸಿ ಮಡಿ
ಮಡಿಕೆಯ ನಿವಾಳಿಸಿ
ನಿಟ್ಟುಸಿರ ಬಿಟ್ಟ
ಬಸವನಂತೆ…
ನೆತ್ತಿ ಮೇಲಣ
ಮದ್ದೇರಿ ಮೆರೆವ
ಮುದ್ದಣನ
ಕರಿಯಂತೆ…
ಕಣ್ಣು ಕುಕ್ಕುವ
ಕೊರತೆಗಳ
ಬದಿಗಿಟ್ಟು
ಬೈತಲೆಯ
ಬಿಂದಿಯ
ಬೆವರೊಳಗಣ
ಕಾವ್ಯ ಕುಂಕುಮದಂತೆ…
ಅವ… ಅವ ಕವಿ
ಎಂಬುವ ಕಾಡಿಗೆಗೆ
ತನ್ನ ಕಪ್ಪೆಂದುಕೊಂಡು
ನನ್ನಿಂದ ದೂರ ಸರಿದವ…
ಹಾಲ್ಬೆಳಕ
ಹಠವಾದಿ
ಹೆಣ್ಣಿನ ಮುಂದೆ
ಹಮ್ಮು ಬಿಟ್ಟು
ಹಿಂದಿರುಗುವ
ಇರಾದೆ ಇಲ್ಲದೇ
ನಡೆದು ಹೋದವ…
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
