ದಿನದ ಸುದ್ದಿ

ಸೇಡಂ | ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ಕಲಬುರಗಿ : ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಸೇಡಂ ತಾಲೂಕಿನ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ ಪಡೆಯಲು ತಮ್ಮ ಆಧಾರ ಸಂಖ್ಯೆಯನ್ನು ತಮ್ಮ ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಬ್ಯಾಂಕಿಗೆ ಭೇಟಿ ನೀಡಿ ತಮ್ಮ ಆಧಾರ್‍ನ್ನು ಎನ್.ಪಿ.ಸಿ.ಐ.ಗೆ ಜೋಡಣೆ ಮಾಡಬೇಕು.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ) ವೆಬ್‍ಸೈಟ್ http//ssp.postmatric.karanataka.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ 2021ರ ಮಾರ್ಚ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿ ವೇತನ ಸಹಾಯವಾಣಿ 080-35254757 ಮತ್ತು ಸೇಡಂ ತಾಲೂಕು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version