Connect with us

ದಿನದ ಸುದ್ದಿ

ಮುಖ್ಯಮಂತ್ರಿ ಮತ್ತು ಸಚಿವರ ಮೊಬೈಲ್ ನಂಬರ್ ಗಳ ಇಲ್ಲಿವೆ ನೋಡಿ…

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಹಾಗೂ ಎಲ್ಲಾ ಸಚಿವರು ಪ್ರಜೆಗಳಿಂದಲೇ ಆಯ್ಕೆಯಾಗಿ ಹೋದವರು.. ರಾಜ್ಯದ ಅಭಿವೃದ್ಧಿಯ ಜೊತೆಗೆ ಪ್ರಜೆಗಳಿಗೆ ಸ್ಪಂದಿಸಬೇಕಾದವರು. ನಿಮ್ಮ ಸಮಸ್ಯೆಗಳನ್ನು ನೇರವಾಗಿ ಕರೆ ಮಾಡಿ ಬಗೆಹರಿಸಿಕೊಳ್ಳಿ. ಇಲ್ಲಿದೆ ನೋಡಿ ಎಲ್ಲಾ ಸಚಿವರುಗಳ ದೂರವಾಣಿ ಸಂಖ್ಯೆ..

01. ಎಚ್.ಡಿ. ಕುಮಾರಸ್ವಾಮಿ
ಖಾತೆ: ಹಣಕಾಸು/ ಇಂಧನ / ಗುಪ್ತವಾರ್ತೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ
ಮೊಬೈಲ್ ಸಂಖ್ಯೆ: 97434 39202

02. ಜಿ. ಪರಮೇಶ್ವರ್
ಖಾತೆ: ಗೃಹ / ಬೆಂಗಳೂರು ನಗರಾಭಿವೃದ್ಧಿ ಸಚಿವರು
ಮೊಬೈಲ್ ಸಂಖ್ಯೆ: 96111 34424

03. ಎಚ್‍.ಡಿ.ರೇವಣ್ಣ
ಖಾತೆ: ಲೋಕೋಪಯೋಗಿ ಸಚಿವರು
ಮೊಬೈಲ್ ಸಂಖ್ಯೆ: 98806 89999

04. ದೇಶಪಾಂಡೆ
ಖಾತೆ: ಕಂದಾಯ ಸಚಿವರು
ಮೊಬೈಲ್ ಸಂಖ್ಯೆ: 98450 50100

05. ಡಿ.ಕೆ. ಶಿವಕುಮಾರ್
ಖಾತೆ: ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ ಸಚಿವರು
ಮೊಬೈಲ್ ಸಂಖ್ಯೆ: 94480 66113

06. ಕೆ.ಜೆ. ಜಾರ್ಜ್
ಖಾತೆ: ಬೃಹತ್ ಕೈಗಾರಿಕೆ, ಐಟಿ ಸಚಿವರು
ಮೊಬೈಲ್ ಸಂಖ್ಯೆ: 9845067437

07. ಬಂಡೆಪ್ಪ ಕಾಶಂಪುರ್
ಖಾತೆ: ಸಹಕಾರ ಸಚಿವರು
ಮೊಬೈಲ್ ಸಂಖ್ಯೆ: 98441 10008

08. ಕೃಷ್ಣಬೈರೇಗೌಡ
ಖಾತೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರು
ಮೊಬೈಲ್ ಸಂಖ್ಯೆ: 94482 77977

09. ಯು.ಟಿ. ಖಾದರ್
ಖಾತೆ: ನಗರಾಭಿವೃದ್ಧಿ ಮತ್ತು ವಸತಿ ಸಚಿವರು
ಮೊಬೈಲ್ ಸಂಖ್ಯೆ: 94483 83919

10. ಸಿ.ಎಸ್. ಪುಟ್ಟರಾಜು
ಖಾತೆ: ಸಣ್ಣ ನೀರಾವರಿ ಸಚಿವರು
ಮೊಬೈಲ್ ಸಂಖ್ಯೆ: 90086 26705

11. ಶಿವಶಂಕರ್ ರೆಡ್ಡಿ
ಖಾತೆ: ಕೃಷಿ ಸಚಿವರು
ಮೊಬೈಲ್ ಸಂಖ್ಯೆ: 9448388104

12. ಪ್ರಿಯಾಂಕ್ ಖರ್ಗೆ
ಖಾತೆ: ಸಮಾಜ ಕಲ್ಯಾಣ ಸಚಿವರು
ಮೊಬೈಲ್ ಸಂಖ್ಯೆ: 98450 67711

13. ಜಮೀರ್ ಅಹಮದ್
ಖಾತೆ: ಆಹಾರ ಮತ್ತ ನಾಗರೀಕ ಪೂರೈಕೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರು
ಮೊಬೈಲ್ ಸಂಖ್ಯೆ: 98459 11111

14. ಶಿವಾನಂದ ಪಾಟೀಲ್
ಖಾತೆ: ಆರೋಗ್ಯ ಸಚಿವರು
ಮೊಬೈಲ್ ಸಂಖ್ಯೆ: 94481 14709

15. ವೆಂಕಟರಮಣಪ್ಪ
ಖಾತೆ: ಕಾರ್ಮಿಕ ಸಚಿವರು
ಮೊಬೈಲ್ ಸಂಖ್ಯೆ: 94484 32924

16. ರಾಜಶೇಖರ್ ಪಾಟೀಲ್
ಖಾತೆ: ಗಣಿ ಮತ್ತು ಭೂವಿಜ್ಞಾನ ಸಚಿವರು
ಮೊಬೈಲ್ ಸಂಖ್ಯೆ: 94481 25487

17. ಪುಟ್ಟರಂಗಶೆಟ್ಟಿ
ಖಾತೆ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
ಮೊಬೈಲ್ ಸಂಖ್ಯೆ: 99642 64020

18. ಶಂಕರ್
ಖಾತೆ: ಅರಣ್ಯ ಸಚಿವರು
ಮೊಬೈಲ್ ಸಂಖ್ಯೆ: 98450 67316

19. ಜಯಮಾಲಾ
ಖಾತೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು
ಮೊಬೈಲ್ ಸಂಖ್ಯೆ: 98440 14908

20. ರಮೇಶ್ ಜಾರಕಿಹೊಳಿ
ಖಾತೆ: ಪೌರಾಡಳಿತ ಮತ್ತು ಯುವಜನ ಮತ್ತು ಕ್ರೀಡೆ ಸಚಿವರು
ಮೊಬೈಲ್ ಸಂಖ್ಯೆ: 96200 93536

21. ಜಿಟಿ ದೇವೇಗೌಡ
ಖಾತೆ: ಉನ್ನತ ಶಿಕ್ಷಣ ಸಚಿವರು
ಮೊಬೈಲ್ ಸಂಖ್ಯೆ: 99002 60968

22. ಸಾರಾ ಮಹೇಶ್
ಖಾತೆ: ಪ್ರವಾಸೋದ್ಯಮ ಸಚಿವರು
ಮೊಬೈಲ್ ಸಂಖ್ಯೆ: 94480 73350

23. ಎನ್ ಮಹೇಶ್
ಖಾತೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
ಮೊಬೈಲ್ ಸಂಖ್ಯೆ: 94484 68972

24. ಡಿ.ಸಿ. ತಮ್ಮಣ್ಣ
ಖಾತೆ: ಸಾರಿಗೆ ಸಚಿವರು
ಮೊಬೈಲ್ ಸಂಖ್ಯೆ: 98458 92929

25. ಎಂ.ಸಿ. ಮನಗೂಳಿ
ಖಾತೆ: ತೋಟಗಾರಿಕೆ ಸಚಿವರು
ಮೊಬೈಲ್ ಸಂಖ್ಯೆ: 99802 26999

26. ವೆಂಕಟರಾವ್ ನಾಡಗೌಡ
ಖಾತೆ: ಪಶುಸಂಗೋಪನೆ ಸಚಿವರು
ಮೊಬೈಲ್ ಸಂಖ್ಯೆ: 97403 16699

27. ಗುಬ್ಬಿ ಶ್ರೀನಿವಾಸ್
ಖಾತೆ: ಸಣ್ಣ ಕೈಗಾರಿಕೆ ಸಚಿವರು
ಮೊಬೈಲ್ ಸಂಖ್ಯೆ: 94480 81854

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ2 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ4 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ4 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ5 days ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ1 week ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ1 week ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ1 week ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ1 week ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ1 week ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending