Connect with us

ದಿನದ ಸುದ್ದಿ

ಅನಧಿಕೃ ಬಿತ್ತನೆ ಬೀಜಗಳ ಖರೀದಿ ; ಎಚ್ಚರಿಕೆ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ದತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ ಹಾಗೂ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಅತ್ಯಮೂಲ್ಯವಾಗಿವೆ. ಈ ನಿಟ್ಟಿನಲ್ಲಿ ರೈತರು ಬಿತ್ತನೆ ಬೀಜ ಖರೀದಿ ಮಾಡುವಾಗ ಎಚ್ಚರ ವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗಧಿಪಡಿಸಿದ ಸಹಕಾರಿ ಸಂಘಗಳ ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು. ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕಳಪೆ, ಬಿಡಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದೆ. ಅಲ್ಲಲ್ಲಿ ರೈತರು ಅನಧಿಕೃತ ಲೂಸ್ ಬಿತ್ತನೆ ಬೀಜಗಳನ್ನು ಖರೀದಿಸುತ್ತಿರುವುದಾಗಿ ತಿಳಿದು ಬಂದಿದೆ.

ಹಲವರು ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ತೊಂದರೆ ಹಾಗೂ ಬೆಳೆ ನಷ್ಠ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವ್ಯದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ. ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕದೇ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಬೇಕು.

ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಮೊ.ಸಂ. 8277931106 & 8277931207 ರವರಿಗೆ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು , ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

Published

on

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.

ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.

ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ

ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.

ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ‌ ಪ್ರಶ್ನೆ.

ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.

ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.

ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?

ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.

“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.

ಎಸ್ಪಿ ಅವರ ಕ್ರಮ ಯಾವಾಗ ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ‌.

ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending