ದಿನದ ಸುದ್ದಿ
ದಾವಣಗೆರೆ | ಸೀತಮ್ಮ ಪ.ಪೂ ಕಾಲೇಜು ವತಿಯಿಂದ ಮಿಂಚಿನ ನೋಂದಣಿ ಜಾಗೃತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ : ಜ.1 ಕ್ಕೆ 18 ವರ್ಷ ಪೂರೈಸಿರುವ ಯುವ ಹಾಗೂ ಭವಿಷ್ಯದ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜ.6 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿರುವ ಮಿಂಚಿನ ನೋಂದಣಿ ಕಾರ್ಯಕ್ರಮದ ಜಾಗೃತಿ ಮೂಡಿಸಲು ಜ. 6 ರಂದು ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ವಿದ್ಯಾರ್ಥಿನಿಯರು ಹೈಸ್ಕೂಲ್ ಮೈದಾನ ಸೇರಿದಂತೆ ನಗರದ ವಿವಿಧ ರಸ್ತೆಗಳಲ್ಲಿ ಪ್ರಭಾತ್‍ಪೇರಿ ನಡೆಸಿದರು. ಈ ಕಾರ್ಯಕ್ರಮದಲ್ಲಿ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರು, ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243