ದಿನದ ಸುದ್ದಿ
ಏ.29ರಂದು ಸೆಮಿಕಾನ್ ಇಂಡಿಯಾ ಸಮ್ಮೇಳನ : ಸಚಿವ ರಾಜೀವ್ ಚಂದ್ರಶೇಖರ್
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ತಿಂಗಳ 29ರಂದು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸೆಮಿಕಾನ್ ಇಂಡಿಯಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಷ್ಟಿಯಲ್ಲಿ ವಿದ್ಯುನ್ಮಾನ ವಲಯದಲ್ಲಿ ಉತ್ಪಾದನೆ, ಸೆಮಿ ಕಂಡಕ್ಟರ್ ವಿನ್ಯಾಸ, ಆವಿಷ್ಕಾರ ವಲಯದಲ್ಲಿ ಭಾರತವನ್ನು ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸೆಮಿಕಾನ್ ಇಂಡಿಯಾ ಸಮ್ಮೇಳನ ಆಯೋಜಿಸಿದೆ ಎಂದು ಹೇಳಿದರು. ಕಳೆದ 75ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತಗಳಲ್ಲಿ ಕ್ಷಿಪ್ರ ಹಾಗೂ ನಿರ್ಣಾಯಕ ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243