Connect with us

ದಿನದ ಸುದ್ದಿ

ಹಿರಿಯ ಸಾಹಿತಿ ಸುಮತೀಂದ್ರ ನಾಡಿಗ ಇನ್ನಿಲ್ಲ

Published

on

ಸುದ್ದಿದಿನ ಡೆಸ್ಕ್: ಹಿರಿಯ ಲೇಖಕ ಸುಮತೀಂದ್ರ ನಾಡಿಗ (83) ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಅವರನ್ನು ಅಗಲಿದ್ದಾರೆ.

ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿರುವ ಡಾ. ಸುಮತೀಂದ್ರ ನಾಡಿಗರು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಮೇ 4, 1935ರಂದು ಜನಿಸಿದರು. ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯಗಳ ಪ್ರತಿಭಾವಂತ ವಿದ್ಯಾರ್ಥಿಯಾದ ನಾಡಿಗರು ಮೈಸೂರು ವಿಶ್ವವಿದ್ಯಾನಿಲಯದಿಂದ ಮತ್ತು ಅಮೆರಿಕದ ಫಿಲೆಡೆಲ್ಫಿಯಾ ವಿಶ್ವವಿದ್ಯಾಲಯಗಳಿಂದ ಇಂಗ್ಲಿಷ್ ಎಂ. ಎ. ಪದವಿಯನ್ನು ಪಡೆದರು. 1985ರಲ್ಲಿ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಡಾಕ್ಟರೇಟ್ ಪಡೆದುಕೊಂಡ ನಾಡಿಗರು ತಮ್ಮ ಪ್ರೌಢ ಪ್ರಬಂಧಕ್ಕಾಗಿ ಆರಿಸಿಕೊಂಡಿದ್ದ ವಿಷಯ ‘ಬೇಂದ್ರೆಯವರ ಕಾವ್ಯದ ವಿಭಿನ್ನ ನೆಲೆಗಳು’. ಬೇಂದ್ರೆ, ಗೋಪಾಲಕೃಷ್ಣ ಅಡಿಗ ಮತ್ತು ಕೆ. ಎಸ್. ನರಸಿಂಹಸ್ವಾಮಿಯವರ ಕಾವ್ಯದ ಬಗ್ಗೆ ಸುಮತೀಂದ್ರ ನಾಡಿಗರು ವಿಶೇಷವಾದ ಅಧ್ಯಯನ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.

ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.

ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

Published

on

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು.

ಜಿಎಂ ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲೂ ಇರುವ ರಂಗಾಸಕ್ತ,ಅಭಿನಯ ಪ್ರಿಯ ವಿದ್ಯಾರ್ಥಿಗಳ ಅಭಿನಯ ಕಲೆಯನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಮಹತ್ತರ ಉದ್ದೇಶ ರಂಗೋತ್ಸವದಾಗಿದ್ದು, ಮೂರು ಹಂತಗಳಲ್ಲಿ ಈ ಸ್ಪರ್ಧೆಯನ್ನು ನಡೆಸಲಾಯಿತು.

ಪ್ರಥಮ ಹಂತ ಆಡಿಷನ್ (ಆಯ್ಕೆ) ಗುಂಪುಗಳ ರಚನೆ ,ಎರಡನೇ ಹಂತ ಪೌರಾಣಿಕ ಸುತ್ತು ಈ ಹಂತದಲ್ಲಿ ಎಲಿಮಿನೇಷನ್ ಪ್ರಕ್ರಿಯೆ ಇದ್ದು ಕಡಿಮೆ ಅಂಕಗಳಿಸಿದವರನ್ನು ಗುಂಪಿನಿಂದ ಹೊರಗುಳಿಸಲಾಯಿತು. ಮೂರನೇ ಹಂತ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆ ಆಗಿದ್ದು ಈ ಸುತ್ತಿಗೆ ಬಂದ ನಾಲ್ಕು ತಂಡಗಳಿಗೆ ‘ಸಾಮಾಜಿಕ ಜಾಗೃತಿ ‘ಎಂಬ ವಿಷಯ ನೀಡಲಾಗಿದ್ದು, ಲೈಂಗಿಕ ದೌರ್ಜನ್ಯ ರೈತರ ಬವಣೆ, ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಡ್ರಗ್ಸ್ ಹಾವಳಿ ಈ ವಿಷಯಗಳನ್ನು ಕೇಂದ್ರೀಕರಿಸಿ ನಾಲ್ಕು ತಂಡಗಳು ಮನೋಜ್ಞವಾಗಿ ಅಭಿನಯಿಸಿದವು.

ತೀರ್ಪುಗಾರರಾಗಿ ಪ್ರೊ. ಗಣೇಶ್ ಜಿ ತಿಲ್ವೆ, ಪ್ರೊ. ದೀಪಿಕಾ ವಿ.ಬಿ, ಪ್ರೊ. ರಾಜೇಶ್ವರಿ ವೈ.ಎಂ ಮೂರು ಹಂತಗಳಲ್ಲೂ ತೀರ್ಪನ್ನು ನೀಡಿದರು. ಶೇಕಡ 70 ತೀರ್ಪುಗಾರರ ತೀರ್ಪು, ಶೇಕಡ 30 ಪ್ರೇಕ್ಷಕರ ಆನ್ಲೈನ್ ವೋಟಿಂಗ್ ಮೂಲಕ ಅಂತಿಮ ತೀರ್ಪನ್ನು ಪ್ರಕಟಿಸಲಾಯಿತು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜಿಎಂ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಸುನಿಲ್ ಕುಮಾರ್ ಬಿ.ಎಸ್, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪನಿರ್ದೇಶಕರಾದ ಡಾ. ಸಂತೋಷ್ ಕುಮಾರ್ ಎಂ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ದೀಪಾ ಬಿ.ಎಸ್ ಉಪಸ್ಥಿತರಿದ್ದು, ರಂಗೋತ್ಸವ-2025ರ ವಿನ್ನರ್ಸ್ ಟ್ರೋಫಿಯನ್ನು ಹಾಗೂ 10000 ನಗದು ಬಹುಮಾನವನ್ನು ಲಿಖಿತ ಮತ್ತು ತಂಡದವರಿಗೆ ಹಾಗೂ ಗೌತಮ್ ಮತ್ತು ತಂಡದವರಿಗೆ ರನ್ನರ್ಸ್ ಟ್ರೋಫಿ ಮತ್ತು 7500 ನಗದು ಬಹುಮಾನವನ್ನು ನೀಡಿದರು.

ಸಾಹಿತ್ಯ, ನಿರ್ದೇಶನ, ರಂಗಸಜ್ಜಿಕೆ ಎಲ್ಲವನ್ನು ಆಯಾ ತಂಡದ ವಿದ್ಯಾರ್ಥಿಗಳೇ ನಿರ್ವಹಿಸಿಕೊಂಡದ್ದು ವಿಶೇಷವಾಗಿತ್ತು. ಪ್ರಸ್ತುತ ಧಾವಂತದ ದಿನಮಾನಗಳಲ್ಲೂ ವಿದ್ಯಾರ್ಥಿಗಳಲ್ಲಿ ಹುದುಗಿರುವ ಈ ರಂಗ ಪ್ರೇಮ, ನಟನಾ ಚತುರತೆ ಪ್ರೇಕ್ಷಕರನ್ನು ಬೆರಗುಗೊಳಿಸಿತು.

ಕಾರ್ಯಕ್ರಮದ ಮೂರು ಹಂತಗಳಲ್ಲೂ ನಿಶಾ ನಿತ್ಯಾ ಕೆ, ಸಾಕಿದ್ ಬಿ.ಆರ್ ರವರು ಮನೋಜ್ಞವಾಗಿ ನಿರೂಪಿಸಿದರು ಹಾಗೂ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವಿದ್ಯಾರ್ಥಿ ಕಾರ್ಯದರ್ಶಿಯಾದ ಸಚಿನ್ ರವರು ಹಾಗೂ ಎಲ್ಲಾ ವಿಭಾಗಗಳ ಸಾಂಸ್ಕೃತಿಕ ವಿದ್ಯಾರ್ಥಿ ಪ್ರತಿನಿಧಿಗಳು ಕಾರ್ಯಕ್ರಮದ ಎಲ್ಲಾ ಹಂತಗಳು ಸುಸೂತ್ರವಾಗಿ ನೆರವೇರಲು ಸಹಕರಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ1 day ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ2 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ2 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ2 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ2 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ1 week ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

ದಿನದ ಸುದ್ದಿ1 week ago

ಹರಿಹರ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳೆಯರ ದೌರ್ಜನ್ಯ ವಿರೋಧಿ ದಿನ ಆಚರಣೆ

ಸುದ್ದಿದಿನ,ಹರಿಹರ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಿಂದ ಮಂಗಳವಾರ ಅಂತರಾಷ್ಟ್ರೀಯ ಮಹಿಳೆಯರ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಪ್ರಸ್ತುತ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ...

ದಿನದ ಸುದ್ದಿ2 weeks ago

ಕತೆ | ಹದ್ದುಗಳ ರಾಜ್ಯ

~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್‌, ಕನ್ನಡಕ್ಕೆ: ಡಾ.ಶಿವಕುಮಾರ್‌ ಕಂಪ್ಲಿ ಮಟಮಟ ಮಧ್ಯಾನ್ಹದೊಳಗ ಬರ ಬರನ ಕಾಲು ಬೀಸಿಗೋಂತ ಪಟ್ನದ ಕಡಿಗೆ ಹೋಗಿ ಬರುತಿದ್ದ ವೀರಭದ್ರಿ. ಆತ ಎಲ್ಯಾನ...

Trending