ದಿನದ ಸುದ್ದಿ
ಸೆ.13 ರಂದು ಲೋಕ್ ಅದಾಲತ್
ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇöಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13 ರಂದು ರಾಷ್ಟೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ರಾಷ್ಟೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್‌ನ್ನು ಆಯೋಜಿಸಲಿವೆ. ಸಾರ್ವಜನಿಕರು ರಾಷ್ಟೀಯ ಲೋಕ್ ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು.
ಈ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಛೇಧನ ಹೋರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದೂ.ಸಂ: 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂ.ಸಂ: 08192-296885, ಹೆÇöನ್ನಾಳಿ ದೂ.ಸಂ:08188-251732, ಚನ್ನಗಿರಿ ದೂ.ಸ 08189-229195 ಮತ್ತು ಜಗಳೂರು ದೂ.ಸ:08196-227600 ಸಂಪರ್ಕಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


