ದಿನದ ಸುದ್ದಿ
ಕಲಬುರಗಿ | ಪ್ರತ್ಯೇಕ ಧ್ವಜಾರೋಹಣ: ಹೋರಾಟಗಾರರ ಬಂಧನ
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ 63 ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ಹಿನ್ನಲೆ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಮಠಾಧೀಶರು ಮತ್ತು 50 ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ಬಂಧಿಸಿ್್ದಾದ್ದಾರೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಎಮ್‌ಎಸ್ ಪಾಟೀಲ್ ನೇತೃತ್ವದಲ್ಲಿ
ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಇವರು ಮುಂದಾಗಿದ್ದರು.
ಎಮ್‌ಎಸ್ ಪಾಟೀಲ್, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷರಾಗಿದ್ದಾರೆ. ಮಾರ್ಗಮಧ್ಯೆ ಹೋರಾಟಗಾರರನ್ನ ಬಂಧಿಸಿದ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಪಟೇಲ್ ವೃತ್ತದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401