ದಿನದ ಸುದ್ದಿ

ಇದೇ 8 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಳೆದು ಒಂದು ತಿಂಗಳಿಂದ ದುರ್ಬಲವಾಗಿದ್ದ ಮುಂಗಾರು ಮತ್ತೆ ಚೇತರಿಕೆ ಕಂಡಿದೆ.

ಇಂದಿನಿಂದ ಇದೇ 8 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್’ ನೀಡಿದೆ.

ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮೀಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version