ದಿನದ ಸುದ್ದಿ
ದಾವಣಗೆರೆ : ಲೀಡ್ನಿಂದ 07 ದಿನಗಳ ನಾಯಕತ್ವ ಶಿಬಿರ ಆಯೋಜನೆ

ಸುದ್ದಿದಿನ, ದಾವಣಗೆರೆ: ನಗರದ ದೇಶಪಾಂಡೆ ಫೌಂಡೇಶನ್ನ ಲೀರ್ಸ ಎಕ್ಸಲ್ರೇಟಿಂಗ ಡೆವಲೆಪಮೆಂಟ ಪ್ರೋಗ್ರಾಮ್ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಮನೋಭಾವನೆಯನ್ನು ಮೂಡಿಸಲು ಲೀಡ್ ಲೀಡರ್ಶಿಪ್ ಶಿಬಿರ-2020 ರ ವಿಶೇಷ ನಾಯಕತ್ವ ಶಿಬಿರವನ್ನು ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಏಳು ದಿನಗಳ ವಿಶೇಷ ನಾಯಕತ್ವ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ನಾಯಕತ್ವ ಪರಿಣಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ, ಅಭಿವೃದ್ದಿ, ತಂಡದ ನಿರ್ವಹಣೆ, ಗುಂಪು ಚರ್ಚೆ, ಸಾರ್ವಜನಿಕ ಭಾಷಣ, ಪೇಂಟಿಂಗ್, ಕರಕುಶಲ ಮತ್ತು ಕ್ರಿಯಾತ್ಮಕ ಚಟುವಟಿಕೆ, ಸಮಯ ನಿರ್ವಹಣೆ, ಹಾಗೂ ವ್ಯಕ್ತಿತ್ವ ವಿಕಸನ ಕುರಿತ ವಿಷಯಗಳ ಮೇಲೆ ತರಬೇತಿ ನೀಡಲಾಗುದು.
ಆಸಕ್ತ ಕರ್ನಾಟಕದ ಪಿಯುಸಿ, ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಪೂರೈಸುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಲುhttps://www.leadcampus.org/llp/ ಲಿಂಕ್ ಬಳಸಿ ರಿಜಿಸ್ಟರ್ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆ- 9900035216, 9686654748 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ | ಕುಟುಂಬಸ್ಥರ ಜಮೀನು ವ್ಯಾಜ್ಯ ; ‘ನ್ಯಾಯ ಕೊಡಿ ಇಲ್ಲಾ ವಿಷ ಕೊಡಿ’ : ತೇಜಸ್ವಿ ಪಟೀಲ್ ನೇತೃತ್ವದಲ್ಲಿ ಪ್ರತಿಭಟನೆ

ಸುದ್ದಿದಿನ,ಚನ್ನಗಿರಿ : ತಾಲೂಕಿನ ಎಕ್ಕೆಗೊಂದಿ ಗ್ರಾಮದ ಪದ್ಮಾವತಿ ಕೋಂ ಲೇಟ್ ಪ್ರಕಾಶ್ ರವರ 28.32 ಎ. ಗುಂ. ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಯನ್ನು ಕುಟುಂಬದ ಇತರ ಸದಸ್ಯರು ಜನರನ್ನ ಗುಂಪುಕಟ್ಟಿಕೊಂಡು ದೌರ್ಜನ್ಯದಿಂದ ಬೆಳೆ ಕಟಾವು ಮಾಡಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಪೋಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಗಮನಕ್ಕೆ ತಂದಿದ್ದರೂ ರಕ್ಷಣೆ ಸಿಕ್ಕಿರುವುದಿಲ್ಲ.
ಸೋಮವಾರ ಇದನ್ನು ವಿರೋಧಿಸಿ ಸಂತೇಬೆನ್ನೂರಿನ ನಾಡಕಚೇರಿ ಮುಂಭಾಗದಲ್ಲಿ ಜಿಪಂ ಸದಸ್ಯರು ಹಾಗೂ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷರಾದ ತೇಜಸ್ವೀ ಪಾಟೀಲ್ ನೇತೃತ್ವದಲ್ಲಿ ‘ನ್ಯಾಯಕೊಡಿ ಇಲ್ಲಾ ವಿಷಕೊಡಿ’ ಎಂದು ಚಳುವಳಿಯನ್ನು ಕಬ್ಬು ಬೆಳೆಗಾರರ ಸಂಘ , ರೈತ ಸಂಘ, ಹಾಗೂ ದಸಂಸ ಸಹಯೋಗದಲ್ಲಿ ಧರಣಿ ಸತ್ಯಗ್ರಹವನ್ನು ನಡೆಸಲಾಯಿತು.
ಧರಣಿಯನ್ನುಧ್ಧೇಶಿಸಿ ಮಾತನಾಡಿದ ರೈತಮುಖಂಡ ಹಾಗೂ ಜಿಪಂ ಸದಸ್ಯರಾದ ತೇಜಸ್ವೀ ಪಾಟೀಲ್ ಪದ್ಮಾವತಿ ವಿಧವೆ ಮಹಿಳೆಯಾಗಿದ್ದು 2 ಜನ ಹೆಣ್ಣು ಮಕ್ಕಳನ್ನು ಹೊಂದಿರುತ್ತಾರೆ . ಇವರು ನ್ಯಾಯಕ್ಕಾಗಿ ಕಚೇರಿಯನ್ನು ಅಲೆದು ಸಾಕಾಗಿದೆ ಇವರಿಗೆ ನ್ಯಾಯ ಕೊಡಿ ಇಲ್ಲಾ ವಿಷಕೊಡಿ ನ್ಯಾಯಲಯದ ಆದೇಶವನ್ನು ನೆಪಮಾಡಿಕೊಳ್ಳದೆ ಕಾನೂನನ್ನು ಸರಿಯಾಗಿ ಪಾಲನೆ ಮಾಡಿ ನೊಂದ ವಿಧವೆ ಮಹಿಳೆಗೆ ನ್ಯಾಯದೊರಕಿಸಿಕೊಡಿ ಎಂದರು.
ಇವರ ಕಟುಂಬದ ಸದಸ್ಯರ ಜಮೀನು ವ್ಯಾಜ್ಯವು ನ್ಯಾಯಲಯದಲ್ಲಿದ್ದು, ಪೋಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳ ಸಮಕ್ಷಮ ಜಮೀನಿನಲ್ಲಿ ಹತ್ತಿ,ಹಾಗೂ ಮೆಕ್ಕೆಜೋಳ ಬಿತ್ತನೆ ಮಾಡಿ ಪಸಲನ್ನು ಕುಟುಂಬದ ಇತರೆ ಸದಸ್ಯರು ದೌರ್ಜನ್ಯದಿಂದ ಜನರ ಗುಂಪುಕಟ್ಟಿಕೊಂಡು ಬೆಳೆದ ಬೆಳೆಯನ್ನು ಕಟಾವು ಮಾಡಿರುವುದು ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತಿದೆ ಆದ್ದರಿಂದ ಅಧಿಕಾರಿಗಳ ಕರ್ತವ್ಯೆಲೋಪದ ಮೇಲೆ ಕ್ರಮಕ್ಕೆ ಒತ್ತಾಯಿಸಲಾಗುವುದೆಂದರು.
ಧರಣಿ ಸ್ಥಳಕ್ಕೆ ತಾಲೂಕ್ ದಂಡಾಧೀಕಾರಿಗಳಾದ ಪಟ್ಟರಾಜ ಗೌಡ ಹಾಗೂ ಸಂತೇಬೆನ್ನೂರು ಆರಕ್ಷಕ ಉಪನೀರಿಕ್ಷಕರಾದ ಶಿವರುದ್ರಪ್ಪ ಎಸ್ ಮೇಟಿ ಆಗಮಿಸಿ ಕೆಲಕಾಲ ಧರಣಿ ನಿರತರೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ನ್ಯಾಯಸಿಗಬಹುದಾದ ಮಾರ್ಗಗಳ ಬಗ್ಗೆ ಚರ್ಚೆ ನಡೆಸಲಾಯಿತು. ಜಮೀನು ವ್ಯಾಜ್ಯವು ನ್ಯಾಯಲಯದಲ್ಲಿರುವಾಗ ನಾವುಗಳು ಯಾವುದೇ ಕ್ರಮ ತಗೆದುಕೊಳ್ಳುಲು ಆಗುವುದಿಲ್ಲಾ ನ್ಯಾಯಲಯದ ತೀರ್ಪು ಬರುವವರೆಗೆ ಕಾದುನೋಡಬೇಕಿದೆ ಎಂದರು.
ಧರಣಿಯಲ್ಲಿ ಪದ್ಮಾವತಿ ಕಟುಂದಬ ಸದಸ್ಯರು ಹಾಗೂ ಸಂಘಟನೆಗಳ ಮುಖಂಡರಾದ ಅಜ್ಜಪ್ಪ ,ಬೆಳಲಗೆರೆ ,ಚನ್ನಬಸಪ್ಪ , ಶಿವಲಿಂಗಸ್ವಾಮಿ ,ಅಂಬೊಜೀರಾವ್ ಕಣಿವೆಬಿಳಚಿ, ಚಿತ್ರಪ್ಪ , ಗೋವಿಂದಸ್ವಾಮಿ , ರಘು ಇನ್ನಿತರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ

ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಹಿನ್ನೆಲೆ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕವಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಸೇರಿದಂತೆ ಗಣ್ಯರು ಸೋಮವಾರದಂದು ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ.
ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ.ವೀರೇಶ್, ಸಾರಿಗೆ ಮಂಡಳಿ ನಿರ್ದೇಶಕರುಗಳಾದ ರಾಜು, ಆರುಂಡಿ ನಾಗರಾಜ್, ರುದ್ರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್ಪಿ ರಾಜೀವ್ ಮುಖ್ಯ ಇಂಜಿನಿಯರ್ ಜಗದೀಶ್ ಚಂದ್ರ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಈ ಶೈಕ್ಷಣಿಕ ವರ್ಷದಿಂದ ಹೊಸ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಕ್ರಮ : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ

ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿಯನ್ನು ಮಾಡಲಾಗಿತ್ತು. ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಹೊಸ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5ಎಕ್ರೆ ಸ್ಥಳವನ್ನು ಗುರುತಿಸಲಾಗಿದ್ದು, ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಡಿಆರ್ಡಿಒ ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಲೈಫ್ ಸ್ಟೈಲ್7 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ7 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ಸಿನಿ ಸುದ್ದಿ7 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ5 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ5 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ5 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್5 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ