ದಿನದ ಸುದ್ದಿ
ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ
ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್‌ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243