ದಿನದ ಸುದ್ದಿ

ಶಾಮನೂರು ಶಿವಶಂಕರಪ್ಪ , ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಕೊರೋನಾ ಪಾಸಿಟಿವ್..!

Published

on

ಸುದ್ದಿದಿನ, ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದಕ್ಕೂ ಮೊದಲು ಅವರ ಪುತ್ರ ಮತ್ತು ಮಾಜಿ ಸಚಿವ ಎಸ್ ಎಸ್ ಮಲ್ಲಿಕರ್ಜುನ ಅವರಿಗೂ ಸೋಂಕು ದೃಢಪಟ್ಟಿತ್ತು. ನಂತರ, ಶಾಸಕರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶನಿವಾರ ಪರೀಕ್ಷಾ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ 90 ವರ್ಷದ ಶ್ಯಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version