ದಿನದ ಸುದ್ದಿ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆಯ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪಿ.ಬಿ ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ವೈದ್ಯಕೀಯ ಸಾಹಾಯಕ ತರಬೇತಿ ಕೇಂದ್ರದಲ್ಲಿ ಸೆ.28 ರಿಂದ 30 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 3 ದಿನಗಳ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ತರಬೇತಿ ಪಡೆಯಲು 30 ಜನರಿಗೆ ಮಾತ್ರ ಅವಕಾಶವಿದ್ದು, ತರಬೇತಿ ಅವಧಿಯಲ್ಲಿ ಊಟ, ವಸತಿ ಸೌಕರ್ಯದ ವ್ಯವಸ್ಥೆ ಇರುವುದಿಲ್ಲ. ಹಾಗೂ ಆಸಕ್ತ ರೈತರು, ಮಹಿಳೆಯರು ನಿರುದ್ಯೋಗ ಯುವಕ, ಯುವತಿಯರು ತರಬೇತಿಗೆ ಹಾಜರಾಗಲು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರ (ಎಸ್‍ಸಿ/ಎಸ್‍ಟಿ) ಜೆರಾಕ್ಸ್ ಪ್ರತಿ ಹಾಗೂ 2 ಪಾಸ್‍ಪೋರ್ಟ್ ಸೈಜಿನ ಫೋಟೋ ತೆಗೆದುಕೊಂಡು ಬರಬೇಕು.

ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಹಾಗೂ ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕ ತರಬೇತಿ ಕೇಂದ್ರ, ದಾವಣಗೆರೆ ದೂಸಂ: 08192-233787 ನ್ನು ಸಂಪರ್ಕಿಸಬಹುದೆಂದು ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version