Connect with us

ದಿನದ ಸುದ್ದಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ; ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ನಾಮಕರಣ ಮಾಡಿ : ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಪತ್ರ

Published

on

ಸಾಂದರ್ಭಿಕ ಚಿತ್ರ

ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಸಿಸಿದ್ದರು.

ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹು ಚರ್ಚೆಗೆ ಒಳಪಟ್ಟಿತು. ವಿಮಾನ‌ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕುವೆಂಪು, ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಹೆಸರನ್ನು ಇಡಿ ಎಂಬ ಸಲಹೆಗಳು ಕೇಳಿ‌ಬಂದಿದ್ದವು.

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಸಿಎಂ ಬೊಮ್ಮಾಯಿಗೆ ಪತ್ರವೊಂದನ್ನು ಬರೆದಿದ್ದಾರೆ. ಹೀಗಿದೆ ಪತ್ರ ಓದಿ.


ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ

ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.

ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.

ಯಡಿಯೂರಪ್ಪ ಪತ್ರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending