ದಿನದ ಸುದ್ದಿ
ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ : ಬಿಎಸ್ ಯಡಿಯೂರಪ್ಪ
ಸುದ್ದಿದಿನ ,ಶಿವಮೊಗ್ಗ: ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅವರು ಸೋಮವಾರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.
ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದರು.
ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕುವುದನ್ನು ನಿರೀಕ್ಷಿಸಲಾಗಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ ಎಂದು ಹೇಳಿದರು.ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾದಿಕಾರಿ ಶಿವಕುಮಾರ್, ಎಸ್ಪಿ ಶಾಂತರಾಜು ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ17 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ17 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

