/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

ಶಿವಮೊಗ್ಗ | ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ : ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ ಭಾನುಪ್ರಕಾಶ್

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟವಾಗಿದ್ದು, ಪತ್ರಿಕಾಗೋಷ್ಟಿ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್.

ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ಇಂದಿಗೂ ಒಪ್ಪಿಕೊಂಡಿಲ್ಲ. ಇದ್ದಕ್ಕಿದ್ದಂತೆ ಒಂದೂವರೆ ವರ್ಷದ ಹಿಂದೆ ನನ್ನನ್ನು ರಾಜ್ಯ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರು. ಚುನಾವಣೆ ಬರುತ್ತಿದ್ದಂತೆ ಏಕಾಏಕಿ ಮತ್ತೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ನನ್ನ ಸೈದ್ದಾಂತಿಕ ನಿಲವು ಹಾಗೂ ನನ್ನ ಮನಸಾಕ್ಷಿ ಒಪ್ಪವುದಿಲ್ಲ. ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿಯೇ ಉಳಿಯುತ್ತೇನೆ‌ ಎಂದರು.

ಬಿ.ವೈ.ರಾಘವೇಂದ್ರ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. ರಾಘವೇಂದ್ರ ಅವರು ಗೆಲ್ಲಬೇಕು ಎಂಬ ಹಂಬಲ ನನಗೂ ಇದೆ. ಯಡಿಯೂರಪ್ಪ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಂತ್ರಗಾರಿಕೆಯಿಂದ ಚುನಾವಣೆ ಗೆಲ್ಲಬಹುದು, ಸರ್ಕಾರ ಉಳಿಸಬಹುದು ಹಾಗೆಯೇ ಕೆಡವಬಹುದು. ಆದರೆ ಮನಸನ್ನು ಕಟ್ಟಲು ಆಗುವುದಿಲ್ಲ ಎಂದು
ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ ಭಾನುಪ್ರಕಾಶ್.

ಎಂದೂ ಬಿಜೆಪಿಯಲ್ಲಿ ಲೆಟರ್ ಸಂಸ್ಕೃತಿ ಇರಲಿಲ್ಲ ಈಗ ಲೆಟರ್ ಸಂಸ್ಕ್ರತಿ ತಂದಿದ್ದಾರೆ. ಕೆಜೆಪಿಯಿಂದ‌ಬಂದ ಯಡಿಯೂರಪ್ಪ‌ ಅವರನ್ನ ಒಪ್ಪಿಕೊಂಡಿದ್ದೆವು.‌ಯಡಿಯೂರಪ್ಪ ಅವರಿಗೆ ಅವರ ವರ್ತನೆ ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದವರನ್ನೇ ಕೆಟ್ಟವರನ್ನಾಗಿ ಮಾಡಿದ್ದಾರೆ.ಸೋಗಡು ಶಿವಣ್ಣ, ಶಿವಯೋಗಿ ಸ್ವಾಮಿ, ಗಿರೀಶ್ ಪಟೇಲ್ ಸೇರಿದಂತೆ ಹಲವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

Trending

Exit mobile version