ದಿನದ ಸುದ್ದಿ
ಪ್ಲಾಸ್ಟಿಕ್ ಕವರ್‍ನಲ್ಲಿರಿಸಿ ನವಜಾತ ಮಗುವನ್ನು ಕೊಟ್ಟಿಗೆಯ ಪಕ್ಕದಲ್ಲಿ ಬಿಟ್ಟೋದ್ರು, ಮುಂದೇನಾಯ್ತು ಗೊತ್ತಾ..!?
ಸುದ್ದಿದಿನ,ಶಿವಮೊಗ್ಗ : ಶಿಕಾರಿಪುರ ತಾಲ್ಲೂಕು ಅಂಜನಾಪುರ ಗ್ರಾಮದ ಕರಿಬಸಪ್ಪ ಎಂಬುವರ ವಾಸದ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆ ಮನೆಯ ಬಲಭಾಗದಲ್ಲಿ ಪ್ಲಾಸ್ಟಿಕ್ ಕವರ್‍ನಲ್ಲಿರಿಸಿ ಬಿಟ್ಟುಹೋಗಿರುವ ನವಜಾತ ಗಂಡು ಮಗುವು ಪತ್ತೆಯಾಗಿದೆ.
ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಜಿಲ್ಲೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಭಾರ, ಶಿಕಾರಿಪುರ ಇವರ ನೇತೃತ್ವದಲ್ಲಿ ಮಗುವಿನ ರಕ್ಷಣೆ ಮಾಡಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಮುಖಾಂತರ ಗ್ರಾಮಾಂತರ ಪೊಲೀಸ್ ಠಾಣೆ, ಶಿಕಾರಿಪುರದಲ್ಲಿ FIR ದಾಖಲಿಸಿದ್ದಾರೆ.
ಮಗುವನ್ನು ಇಲಾಖೆಯ ವಶಕ್ಕೆ ಪಡೆದು ಆರೋಗ್ಯ ಇಲಾಖೆಯ ನೆರವಿನೊಂದಿಗೆ ಅಂಬ್ಯುಲೆನ್ಸ್ ಮೂಲಕ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ NICU ಘಟಕಕ್ಕೆ ಮಗುವಿನ ಸೂಕ್ತ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಜಿ.ಜಿ. ಸುರೇಶ್, ಜಿಲ್ಲೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243