ದಿನದ ಸುದ್ದಿ

‘ಮಲ‌ಹೊರುವ’ ಅನಿಷ್ಟ ಪದ್ಧತಿಗೆ ನಿಷೇಧ ಹೇರಿದ ಶಿವಮೊಗ್ಗ ನ್ಯಾಯಾಲಯ

Published

on

ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ತಲೆಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ಘನ ನ್ಯಾಯಾಲಯ ಮತ್ತು ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಂಪ್ಲಾಯ್‍ಮೆಂಟ್ ಆಫ್ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಚರಣೆಗೆ ಕಾರಣರಾದವರು ಮತ್ತು ಸದರಿ ಪದ್ದತಿಯನ್ನು ಘನ ನ್ಯಾಯಾಲಯ ಮತ್ತು ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಂಪ್ಲಾಯ್‍ಮೆಂಟ್ ಆಫ್ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಆಚರಣೆಗೆ ಕಾರಣರಾದವರು ಮತ್ತು ಸದರಿ ಪದ್ಧತಿಯನ್ನು ಮಾಡುತ್ತಿರುವವರನ್ನು ಅಪರಾಧಿಗಳಾಗಿ ಪರಿಗಣಿಸಲಾಗುವುದು.

ಈ ನಿಮಯದನ್ವಯ ಒಣ ಶೌಚಾಲಯಗಳನ್ನು ಹೊಂದಿರುವುದಾಗಲಿ, ತಲೆ ಮೇಲೆ ಮಲ ಹೊರುವುದಾಗಲಿ ಹಾಗೂ ಮಲಹೊರುವ ಪದ್ಧತಿಗೆ ಪ್ರಚೋದನೆ ನೀಡುವುದನ್ನು ನಿಷೇಧಿಸಿದೆ. ಇನ್ನು ಮುಂದೆ ಶೌಚಾಲಯದ ಗುಂಡಿಗಳನ್ನು ಯಾವುದೇ ವ್ಯಕ್ತಿಗಳು ಕೈಯಿಂದ ಸ್ವಚ್ಚ ಮಾಡದೇ ಸಕ್ಕಿಂಗ್ ಯಂತ್ರದ ಮೂಲಕವೇ ಸ್ವಚ್ಚ ಮಾಡಿಸತಕ್ಕದ್ದೆಂದು, ಇಲ್ಲವಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಮಹಾನಗರಪಾಲಿಕೆಯಲ್ಲಿರುವ ಸಕ್ಕಿಂಗ್ ಯಂತ್ರಗಳನ್ನು ಉಚಿತವಾಗಿ ಪೂರೈಸಲಾಗುತ್ತಿದೆ. ಇದನ್ನು ಉಪಯೋಗಿಸಿಕೊಂಡು ಶೌಚಾಲಯ ಗುಂಡಿಗಳನ್ನು ಸ್ವಚ್ಛಗೊಳಿಸಿಕೊಳ್ಳತಕ್ಕದ್ದು. ಈ ನಿಟ್ಟಿನಲ್ಲಿ ಯಾವುದೇ ಅನಾಹುತಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸುವಂತೆಯೂ ಸಹ ಸೂಚಿಸಲಾಗಿದೆ. ಸಕ್ಕಿಂಗ್‍ಯಂತ್ರ ಬೇಕಾದಲ್ಲಿ ಅಥವಾ ಒಳಚರಂಡಿ ಕಟ್ಟಿಕೊಂಡಿದ್ದಲ್ಲಿ ದೂರುಗಳನ್ನು ಮಹಾನಗರಪಾಲಿಕೆ ಟೋಲ್ ಫ್ರೀ ನಂ.18004257677ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending

Exit mobile version