ದಿನದ ಸುದ್ದಿ
ಶಿವಮೊಗ್ಗ : ಪತ್ರಿಕೋದ್ಯಮ ಮಹಿಳಾ ಪದವೀಧರರಿಂದ ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳನ್ನು ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು.
ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ವಯೋಮಿತಿ 40ವರ್ಷ ಮೀರಿರಬಾರದು.
ಆಯ್ಕೆಯಾದವರಿಗೆ ಮಾಸಿಕ 15 ಸಾವಿರ ರೂಪಾಯಿ ಗೌರವ ಧನ ನೀಡಲಾಗುವುದು. ತರಬೇತಿ ಅವಧಿ 9 ತಿಂಗಳು. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಜುಲೈ 4 ಕಡೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರು ಸ್ಟೇಡಿಯಂ ಹತ್ತಿರ, ಸವಳಂಗ ರಸ್ತೆ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182- 278638 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243