Connect with us

ದಿನದ ಸುದ್ದಿ

ವಿಡಿಯೋ | ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ

Published

on

ಸುದ್ದಿದಿನ,ಶಿವಮೊಗ್ಗ : ಕಾರಿಗೆ ಸೈಡ್ ಕೊಡಲಿಲ್ಲವೆಂದು ಖಾಸಗಿ ಬಸ್ ನ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಹೆಬ್ರಿ ಬಳಿ ನಡೆದಿದೆ.ಶಿವಮೊಗ್ಗದಿಂದ- ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸಿನ ನಿರ್ವಾಹಕ ಗಣೇಶ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಅಲ್ಲದೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡಿರುವ ಬಸ್ ನ ನಿರ್ವಾಹಣ ಗಣೇಶ್ ಶೆಟ್ಟಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಬಸ್ ಶಿವಮೊಗ್ಗದಿಂದ ಮಂಗಳೂರಿಗೆ ಬರುತ್ತಿದ್ದು, ಆಗುಂಬೆ ಘಾಟಿಯಲ್ಲಿ ಬರುವಾಗ ಹಿಂದೆ ಬರುತ್ತಿದ್ದ ಕಾರಿನವರು ನಿರಂತರ ಹಾರ್ನ್ ಮಾಡಿದ್ದಾರೆ. ಆದರೆ ಆಗುಂಬೆ ಘಾಟಿಯಲ್ಲಿ ತಿರುವುಗಳು ಇದ್ದ ಕಾರಣ ಚಾಲಕ ವಾಹನಕ್ಕೆ ಸೈಡ್ ಕೊಟ್ಟಿರಲಿಲ್ಲ. ಅಲ್ಲದೆ ಬಸ್ ಬಾಗಿಲ ಬಳಿ ಇದ್ದ ನಿರ್ವಾಹಕ ಕಾರಿನಲ್ಲಿ ಇದ್ದವರಿಗೆ `ಸ್ವಲ್ಪ ತಾಳಿ, ಹಾರ್ನ್ ಮಾಡಬೇಡಿ’ ಎಂದಿದ್ದಾರೆ.

ಇಷ್ಟಕ್ಕೆ ಕಾರಿನಲ್ಲಿ ಇದ್ದವರು ಕೋಪಗೋಡಿದ್ದಾರೆ. ವಾಹನ ಸೋಮೇಶ್ವರ ದಾಟಿದ ನಂತರ ಕಾಡು ಪ್ರದೇಶದಲ್ಲಿ ಬಸ್ ಅಡ್ಡ ಗಟ್ಟಿ ನಿರ್ವಾಹಕನನ್ನು ಬಸ್ಸಿನಿಂದ ಹೊರಗೆಳೆದು ಅರೆಬೆತ್ತಲೆ ಮಾಡಿ ಥಳಿಸಿದ್ದಾರೆ. ಅಲ್ಲದೆ ಬಸ್ಸಿನ ಒಳಗಡೆ ಕೂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಪುಂಡರ ಆರ್ಭಟಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಸುಮ್ಮನೆ ಕುಳಿತಿದ್ದದ್ದು ವಿಪರ್ಯಾಸವಾಗಿದ್ದು, ಯಾರೊಬ್ಬರು ನಿರ್ವಾಹಕನ ಸಹಾಯಕ್ಕೆ ಬಂದಿಲ್ಲ.

ಈ ಪುಂಡರು ಬೇರೆ ಊರಿನಿಂದ ಈ ಭಾಗಕ್ಕೆ ಪ್ರವಾಸ ಬಂದವರು ಎನ್ನಲಾಗಿದ್ದು, ಹಲ್ಲೆಯ ದೃಶ್ಯಾವಳಿಗಳು ಬಸ್ಸಿನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

#ಆಗುಂಬೆ ಘಾಟಿಯಲ್ಲಿ ಸೈಡ್ ಕೊಡಲಿಲ್ಲ ಎಂದು ಖಾಸಗಿ ಬಸ್ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ#ಆಗುಂಬೆ ಘಾಟಿಯಲ್ಲಿ ಸೈಡ್ ಕೊಡಲಿಲ್ಲ ಎಂದು…

Posted by Zoomkarnataka on Tuesday, 2 July 2019

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ...

ದಿನದ ಸುದ್ದಿ1 day ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ1 day ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ4 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ4 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ5 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ6 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ7 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

Trending