Connect with us

ದಿನದ ಸುದ್ದಿ

ಶಿವಮೊಗ್ಗ ನಗರ ಮಾದರಿ ನಗರವಾಗಿ ಅಭಿವೃದ್ಧಿ : ಯಡಿಯೂರಪ್ಪ

Published

on

ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ, ಹಳೆ ಜೈಲು ಪ್ರದೇಶದಲ್ಲಿ ಸಾರ್ವಜನಿಕರ ಬಳಕೆಗೆ ಉದ್ಯಾನವನ, ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದ್ದು, ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಮೊಗ್ಗ ನಗರದಲ್ಲಿ 32ಕಿಮಿ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಆದಷ್ಟು ಬೇಗನೆ ಚಾಲನೆ ನೀಡಲಾಗುವುದು. ಈಗಾಗಲೇ ಸುಮಾರು ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಈಗಾಗಲೇ ಭೂಸ್ವಾಧೀನ ಪೂರ್ಣಗೊಂಡಿರುವ ಕಡೆಗಳಲ್ಲಿ ಕಾಮಗಾರಿಯನ್ನು ಆರಂಭಿಸಬೇಕು ಎಂದು ಅವರು ಸೂಚನೆ ನೀಡಿದರು.

ಶಿವಮೊಗ್ಗ ಹೊರ ವಲಯದಲ್ಲಿ ನೆನಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ತಕ್ಷಣ ಆರಂಭಿಸಲು 40ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಪ್ರಸ್ತುತ 1500ಮೀಟರ್‍ವರೆಗೆ ರನ್‍ವೇ ನಿರ್ಮಾಣಕ್ಕೆ ಯಾವುದೇ ತಾಂತ್ರಿಕ ತೊಡಕು ಇರುವುದಿಲ್ಲ. ಏರ್‍ಬಸ್‍ನಂತಹ ವಿಮಾನಗಳ ಹಾರಾಟಕ್ಕೆ 1800 ಮೀಟರ್ ರನ್‍ವೇ ಅಗತ್ಯವಿದ್ದು, ಇದಕ್ಕೆ ಎದುರಾಗುವ ಎಲ್ಲಾ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಆದಷ್ಟು ಬೇಗನೆ ವಿಮಾನ ನಿಲ್ದಾಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಹೇಳಿದರು.

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಹಳೆ ಜೈಲಿನ ಪ್ರದೇಶದಲ್ಲಿ ಸ್ಮಾರಕಗಳನ್ನು ಉಳಿಸಿಕೊಂಡು ಫ್ರೀಡಂ ಪಾರ್ಕ್, ಸುಂದರವಾದ ವಿಶಾಲ ಉದ್ಯಾನವನ, ಸಾರ್ವಜನಿಕರ ಬಳಕೆಗೆ ಮೈದಾನ, ಸಭೆ ಸಮಾರಂಭಗಳನ್ನು ನಡೆಸಲು ಅವಕಾಶ ಸೇರಿದಂತೆ ನಾಗರಿಕರಿಗೆ ಅನುಕೂಲವಾಗುವಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಸಮಗ್ರ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲು ಸೂಚಿಸಲಾಗಿದೆ. ಪೊಲೀಸ್ ತರಬೇತಿ ಕೇಂದ್ರ ನಿರ್ಮಾಣಕ್ಕೆ ಅಗತ್ಯವಾದ 50ಎಕ್ರೆ ಸ್ಥಳವನ್ನು ಬೇರೆ ಕಡೆ ಗುರುತಿಸಲು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending