Connect with us

ದಿನದ ಸುದ್ದಿ

ಶೋಷಿತ ಸಮುದಾಯಗಳ ಆರ್ಥಿಕಾಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ: ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ

Published

on

ಸುದ್ದಿದಿನ,ದಾವಣಗೆರೆ : ದೇವರಾಜ್ ಅರಸುರವರು (D.Devaraj Urs – Former Chief minister of Karnataka ) ಹಾಕಿಕೊಟ್ಟ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಎಲ್ಲಾ ಸಮುದಾಯಗಳು ( Communities) ಅಭಿವೃದ್ದಿ ( Development ) ಹೋದುವ ಮೂಲಕ ಅವಕಾಶ ವಂಚಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ( Shivananda Kapashi ) ಹೇಳಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ | ಹದಡಿ | ದರೋಡೆಗೆ ಹೊಂಚು ಹಾಕಿದ್ದ ಓರ್ವ ಆರೋಪಿ ಸೆರೆ : ಮಾರಕಾಸ್ತ್ರಗಳು ವಶಕ್ಕೆ

ಪರಿಶಿಷ್ಟ ಸಮುದಾಯಗಳನ್ನು ಒಳಗೊಂಡಂತೆ ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದರೆ ಇಡೀ ರಾಷ್ಟ್ರ ಬಲಿಷ್ಠವಾಗುತ್ತದೆ. ಆದ್ದರಿಂದ ಕುಲ-ಕಸಬುಗಳನ್ನು ಆಸರೆಯಾಗಿಸಿಕೊಂಡು ಬದುಕುತ್ತಿರುವ ಶೋಷಿತ ಮತ್ತು ಹಿಂದುಳಿದ ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಸರ್ಕಾರ ನಿಗಮಗಳನ್ನು ಸ್ಥಾಪಿಸಿ, ಅವುಗಳಿಗೆ ಪೆÇ್ರೀತ್ಸಾಹ ಕೊಡುವ ಮೂಲಕ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳಿಸಿ ಮುಖ್ಯವಾಹಿನಿಗೆ ತರಲು ಅನೇಕ ಯೋಜನೆಗಳನ್ನು ರೂಪಿಸಿದೆ ಎಂದರು.

ಈ ಹಿಂದೆ ಒಂದು ದಿನ ಮಾತ್ರ ದೇವರಾಜ್ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಪ್ರಸಕ್ತ ವರ್ಷದಲ್ಲಿ ಸರ್ಕಾರದ ನಿರ್ದೇಶನದಂತೆ ಒಟ್ಟು ಮೂರು ದಿನಗಳ ಕಾಲ ಅರಸು ಜನ್ಮದಿನಾಚರಣೆಯನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು..

ದಾದಾಪೀರ್ ನವಿಲೇಹಾಳ್ ಮಾತನಾಡಿ, ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು, ಸಾವಿರಾರು ಎಕರೆ ಭೂಮಿಯನ್ನು ಭೂ ರಹಿತ ಕುಟುಂಬಗಳಿಗೆ ಒದಗಿಸಿ ಆತ್ಮಾಭಿಮಾನ ತುಂಬಿದ ಕೀರ್ತಿ ದೇವರಾಜ್ ಅರಸು ಅವರಿಗೆ ಸಲ್ಲುತ್ತದೆ. ಸಂವಿಧಾನದ ಅಧಿಕಾರದ ಸವಿಯನ್ನೆ ಕಾಣದ ಜನಾಂಗಗಳ ವ್ಯಕ್ತಿಗಳನ್ನು ಗುರುತಿಸಿ ರಾಜಕೀಯಕ್ಕೆ ತಂದು ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟ ಮಹಾನ್ ನಾಯಕರಾಗಿದ್ದರು.

ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಕೂಡ ದೇಶದಲ್ಲಿ ಜೀತ ಪದ್ದತಿ ಮತ್ತು ಮಲ ಹೊರುವ ಪದ್ಧತಿಯಂತಹ ಅನೇಕ ಅನಿಷ್ಟ ಆಚರಣೆಗಳಿದ್ದವು, ಅಂತಹ ಅನಿಷ್ಟ ಆಚರಣೆಗಳನ್ನು ಕಾನೂನಿನ ಮೂಲಕ ಅರಸುರವರು ನಿಷೇಧ ಮಾಡಿದರು. ರಾಜ್ಯಾದ್ಯಂತ ವಸತಿ ನಿಲಯಗಳನ್ನು ಸ್ಥಾಪಿಸಿ ಬಡವರ, ಶೋಷಿತರ ಮಕ್ಕಳಿಗೆ ಶಿಕ್ಷಣ ಒದಗಿಸುವ ಕ್ರಾಂತಿಕಾರಕ ಬದಲಾವಣೆಯ ಹೆಜ್ಜೆಯನ್ನು ಇಟ್ಟವರು ದೇವರಾಜ ಅರಸು ಅವರು ಎಂದು ಸ್ಮರಿಸಿದರು.

1973ರ ನವೆಂಬರ್ 01 ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ರಾಜ್ಯದ ಎಲ್ಲಾ ಗುಡಿಸಲುಗಳಿಗೆ ಉಚಿತ ವಿದ್ಯುತ್ ಪೂರೈಸುವ ಭಾಗ್ಯಜ್ಯೋತಿ ಯೋಜನೆ ಸೇರಿದಂತೆ ಪದವೀಧರರಿಗೆ ನಿರುದ್ಯೋಗ ಭತ್ಯೆ, ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ವಿಧವಾ ವೇತನದಂತಹ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿ ಲಕ್ಷಾಂತರ ಕುಟುಂಬಗಳಿಗೆ ಬೆಳಕಾದ ಪ್ರಬುದ್ದ ರಾಜಕಾರಣಿ ಅರಸು ಎಂದು ಬಣ್ಣಿಸಿದರು.

ಪ್ರಸ್ತುತ ಸಾಲಿನಿಂದ ಜಾರಿಗೆ ತಂದಿರುವ “ದೇವರಾಜ್ ಅರಸ್ ಪ್ರಶಸ್ತಿ”ಯನ್ನು ಜಿಲ್ಲೆಯ ಗೊಲ್ಲರ ಯಾದವ ಸಂಘಕ್ಕೆ ವಿತರಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ.ಎಸ್ ಮಾತನಾಡಿ, ಅನೇಕ ಹಳ್ಳಿಗಳಲ್ಲಿ ಮೂಢನಂಬಿಕೆ, ಕಂದಾಚಾರಗಳು ಇನ್ನೂ ಜಾರಿಯಲ್ಲಿವೆ. ಮುಟ್ಟಾದ ಮಹಿಳೆಯರನ್ನು ಹಟ್ಟಿಯಿಂದ ದೂರವಿರಿಸುವ ಅನಿಷ್ಟ ಪದ್ದತಿಯನ್ನು ತೊಲಗಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ನಮ್ಮ ಕಾರ್ಯವನ್ನು ಗುರುತಿಸಿ ದೇವರಾಜ್ ಅರಸ್ ಅವರ ಹೆಸರಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು ಇನ್ನಷ್ಟು ಸಮಾಜಮುಖಿ ಬದಲಾವಣೆ ಕಾರ್ಯಗಳನ್ನು ಮಾಡಲು ಸ್ಫೂರ್ತಿ ನೀಡಿದಂತಾಗಿದೆ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ಬಳಿ ಇರುವ ಡಿ.ದೇವರಾಜ್ ಅರಸ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ವೀರಗಾಸೆ, ಡೊಳ್ಳುಕುಣಿತ, ಪೂರ್ಣಕುಂಭ, ಹಗಲುವೇಷ ಹಾಗೂ ಇನ್ನಿತರೆ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ತುಂಗಭದ್ರಾ ಸಭಾಂಗಣದ ಬಳಿ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜಿ. ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಚನ್ನಪ್ಪ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ದೂಡಾ ಅಧ್ಯಕ್ಷ ಸುರೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ್.ಆರ್ ಮದರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮೆ ಕೌಸರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಮೇಶ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending