Connect with us

ಕ್ರೀಡೆ

ಇಮ್ರಾನ್ ಖಾನ್ ಪಾಕಿಸ್ತಾನವನ್ನು ಏಷ್ಯಾದ ಟೈಗರ್ ಮಾಡ್ತಾರಂತೆ !

Published

on

ಸುದ್ದಿದಿನ ಡೆಸ್ಕ್: ಜುಲೈ 25ರಂದು ನಡೆದ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಜಯಗಳಿಸಿದ್ದು, ಹೊಸ ಪ್ರಧಾನಿ ಪಾಕಿಸ್ತಾನವನ್ನು ಏಷ್ಯಾದ ಟೈಗರ್ ಮಾಡಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಶೋಯೆಬ್‌ ಅಖ್ತರ್ ಹೇಳಿದ್ದಾರೆ. ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪಾಕಿಸ್ತಾನವನ್ನು ಏಷ್ಯಾದ ಟೈಗರ್ ಆಗಲಿದೆ. ಇದಕ್ಕೆ ಪೂಕವಾಗಿ ಇಮ್ರಾನ್ ಖಾನ್ ಕೆಲಸ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಇಮ್ರಾನ್ ಖಾನ್ ಗೆಲುವಿನಿಂದ ಭಾರತಕ್ಕೆ ಹೊಸ ಕಿರಿಕಿರಿ ಶುರುವಾಗಲಿವೆ ಎಂಬ ಮಾತು ಕೇಳಿಬರುತ್ತಿವೆ. ಏಕೆಂದರೆ ಇಮ್ರಾನ್ ಖಾನ್ ಮೇಲೆ ಪಾಕಿಸ್ತಾನದ ಸೇನೆಯ ಹಿಡಿತ ಹೆಚ್ಚಿದ್ದು, ಅದರಂತೆ ಕೆಲಸ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ.

Web title: shoaib akhtar about imran khan

ಕ್ರೀಡೆ

ಸಹಾಯಧನ ನೀಡಲು ಕ್ರೀಡಾಪಟುಗಳಿಂದ ಪ್ರಸ್ತಾವನೆಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡಲು ಕ್ರೀಡಾಪಟುಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.

ಪ್ರಸ್ತಾವನೆ ಸಲ್ಲಿಸಬಯಸುವ ಕ್ರೀಡಾಪಟುಗಳು(ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಭಾರತೀಯ ನಾಗರೀಕರಾಗಿರಬೇಕು ಅಥವಾ ಕರ್ನಾಟಕದಲ್ಲಿ ಕನಿಷ್ಟ ಹತ್ತು ವರ್ಷಗಳ ಕಾಲ ಸಾಮಾನ್ಯ ನಿವಾಸಿಯಾಗಿದ್ದು ಹಿಂದಿನ 3 ಕ್ಯಾಲೆಂಡರ್ ವರ್ಷಗಳಲ್ಲಿ ನಿರಂತರವಾಗಿ ರಾಜ್ಯವನ್ನು ಪ್ರತಿನಿಧಿಸಿರುವ ಯುವ ಕ್ರೀಡಾಪಟುಗಳಾಗಿರಬೇಕು. ಅಂತರರಾಷ್ಟ್ರೀಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ಅಂತರ ರಾಜ್ಯ/ಅಂತರ ವಿಶ್ವವಿದ್ಯಾನಿಲಯ/ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಅರ್ಹ ಕ್ರೀಡಾಪಟುಗಳು ಫೆ.3 ರ ಒಳಗಾಗಿ ಪ್ರಸ್ತಾವನೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಈ ಕಚೇರಿಯನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಫೆ. 5 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ : ಕೋವಿಡ್ ಮಾರ್ಗಸೂಚಿ ಅನುಸರಿಸಿ ಸ್ಪರ್ಧೆಗಳ ಆಯೋಜನೆ : ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಬಾರಿ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ. 5, 6 ಮತ್ತು 7 ರಂದು ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಅನುಸರಿಸಿ, ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದೆ.

ಕ್ರೀಡಾಕೂಟ ಆಯೋಜನೆ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಧಿಕಾರಿಗಳು ಹಾಗೂ ನೌಕರರ ಸಂಘದವರು ಸರ್ಕಾರದ ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು.

ನೌಕರರ ಸಂಘದ ತಾಲ್ಲೂಕು ಘಟಕಗಳು ಆಯಾ ತಾಲ್ಲೂಕಿನಲ್ಲಿ ಸಭೆ ನಡೆಸಿ, ಕ್ರೀಡಾಕೂಟ ಆಯೋಜನೆ ಬಗ್ಗೆ ಮಾಹಿತಿ ದೊರೆಯುವಂತೆ ಮಾಡಿ, ಎಲ್ಲ ನೌಕರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು. ಕ್ರೀಡಾಕೂಟದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಗತ್ಯ ಸಹಕಾರ, ನೆರವು ನೀಡಲಿದೆ. ಒಟ್ಟಾರೆ ಕ್ರೀಡಾಕೂಟದಲ್ಲಿ ನೌಕರರು ಸಂತಸ, ಸಂಭ್ರಮದಿಂದ ಪಾಲ್ಗೊಳ್ಳುವಂತಾಗಬೇಕು.

ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಹಾರ, ಟೀಶರ್ಟ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ತಾವೂ ಸಹ ಷಟಲ್ ಬ್ಯಾಡ್ಮಿಂಟನ್ ಆಟಗಾರನಾಗಿದ್ದು, ಖುದ್ದು ಸ್ಪರ್ಧೆಯಲ್ಲಿ ಪಾಲ್ಗೊಂಡು ನೌಕರರಿಗೆ ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.

ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ಸರ್ಕಾರದಿಂದ 1.5 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತ್‍ನಿಂದ 3 ಲಕ್ಷ ಸೇರಿದಂತೆ 4.5 ಲಕ್ಷ ರೂ. ಅನುದಾನದ ಲಭ್ಯತೆಯಾಗಲಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ನೌಕರರು ತಮ್ಮ ಹೆಸರು ಹಾಗೂ ವಿವರದೊಂದಿಗೆ ನೊಂದಣಿ ಮಾಡಿಸಲು ಜ. 28 ಕೊನೆಯ ದಿನವಾಗಿದೆ. ನಿಗದಿತ ಅವಧಿಯೊಳಗೆ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಕೊನೆಯ ಹಂತದಲ್ಲಿ ಸ್ಪರ್ಧೆಗಳಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶವಿಲ್ಲ ಎಂದರು.

ಈ ಬಾರಿಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಅಂಗವಾಗಿ, ನೌಕರರ ಸಮುದಾಯ ಭವನದಲ್ಲಿ ಸ್ಪರ್ಧೆಗಳ ಆಯೋಜನೆ ಬಳಿಕ ಸಂಜೆ ವೇಳೆ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಏಪ್ರಿಲ್ 21 ರ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಗಣರಾಜ್ಯೋತ್ಸವ ಸಮಾರಂಭದ ಬದಲಿಗೆ ಏ. 21 ರಂದು ಜರುಗುವ ನೌಕರರ ದಿನಾಚರಣೆಯಂದು ಪ್ರದಾನ ಮಾಡುವಂತೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮನವಿ ಮಾಡಿದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರು ಮಾತನಾಡಿ, ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ಕ್ರಿಕೆಟ್, ಬ್ಯಾಸ್ಕೇಟ್‍ಬಾಲ್ ಮತ್ತಿತರೆ ಕ್ರೀಡೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ, ಕುಸ್ತಿ- ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣ, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್- ಎಸ್‍ಎಸ್ ಬಡಾವಣೆಯ ನೇತಾಜಿ ಸುಭಾಷ್‍ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಲ್ಲದೆ ಸಾಂಸ್ಕøತಿಕ ಸ್ಪರ್ಧೆಗಳನ್ನು ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಿದ್ದಲಿಂಗಸ್ವಾಮಿ, ಖಜಾಂಚಿ ಕಲ್ಲೇಶ್ವರಪ್ಪ, ಸಂಘಟನಾ ಕಾರ್ಯದರ್ಶಿ ಮಂಜಮ್ಮ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಜಗಳೂರು- ಎನ್.ಸಿ. ಅಜ್ಜಯ್ಯ, ಹೊನ್ನಾಳಿ-ಚಂದ್ರಶೇಖರ್, ಹರಿಹರ-ರೇವಣಸಿದ್ದಪ್ಪ, ನ್ಯಾಮತಿ-ನಾಗರಾಜ್ ಹಾಗೂ ಚನ್ನಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ರಾಜಕೀಯ2 hours ago

ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು...

ಲೈಫ್ ಸ್ಟೈಲ್3 hours ago

ಇಂದಿನ ಕರುವೇ ನಾಳಿನ ಹಸು..!

ಡಾ.ಎನ್.ಬಿ.ಶ್ರೀಧರ,ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ,ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ “ನಮ್ಮನೇ ಕರುಗಳಿಗೆಲ್ಲಾ ಗಡಿಗೆ ಹೊಟ್ಟೆ ಸಾರ್.. ಏನೂ ಮಾಡಿದ್ರೂ ಸುಧಾರಿಸ್ತಿಲ್ಲ.. ಜಂತಿನ ಔಷಧಿ 10...

ದಿನದ ಸುದ್ದಿ5 hours ago

ಗ್ರಾಮ ಪಂಚಾಯತಿ ಸದಸ್ಯರಿಗೆ ಹೂವಿನಹೊಳೆ ಪ್ರತಿಷ್ಠಾನ ಗೌರವ ಸದಸ್ಯತ್ವ ಪ್ರದಾನ : ಹಂಚಗುಳಿ ಗ್ರಾಮ ರಾಜ್ಯಕ್ಕೆ ಮಾದರಿ

ಸುದ್ದಿದಿನ, ರಾಮನಗರ : ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಹಂಚಗುಳಿ ಗ್ರಾಮದಿಂದ ಆಯ್ಕೆಯಾದ ಸದಸ್ಯರಾದ ಮಲ್ಲೇಶ್ ಹಾಗೂ ಶಾಂತಮ್ಮ ಅವರಿಗೆ ”ಹೂವಿನಹೊಳೆ ಪ್ರತಿಷ್ಠಾನದ...

ದಿನದ ಸುದ್ದಿ6 hours ago

ದಾವಣಗೆರೆ ಗಾಜಿನ ಮನೆ ಪುಷ್ಪ ಪ್ರದರ್ಶನದ ಫೋಟೋ ಆಲ್ಬಂ : ಮಿಸ್ ಮಾಡ್ದೆ ನೋಡಿ..!

ಸುದ್ದಿದಿನ,ದಾವಣಗೆರೆ : ತೋಟಗಾರಿಕೆ ಬಗ್ಗೆ ಸಾರ್ವಜನಿಕರಲ್ಲಿ ಅಭಿರುಚಿ ಹೆಚ್ಚಿಸಲು ಹಾಗೂ ಮಕ್ಕಳಲ್ಲಿ ಗಿಡಗಳ ಬಗ್ಗೆ ಕುತೂಹಲ ಹೆಚ್ಚಿಸಲು ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ಜ.23 ರಿಂದ 26...

ದಿನದ ಸುದ್ದಿ6 hours ago

ಕುಡಿಯುವ ನೀರಿನ ಅವಶ್ಯಕತೆ ಹಾಗೂ ನೈಜ ಪರಿಸರವಾಗಿ ಉಳಿಸಲು ಕುಂದವಾಡ ಕೆರೆ ಅಭಿವೃದ್ಧಿ : ಸಂಸದ ಜಿ.ಎಂ. ಸಿದ್ದೇಶ್ವರ

ಸುದ್ದಿದಿನ,ದಾವಣಗೆರೆ : ಕುಂದವಾಡ ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ...

ದಿನದ ಸುದ್ದಿ8 hours ago

ದಾವಣಗೆರೆ ತಂಬಾಕು ಮುಕ್ತ ನಗರ : ಅಧಿಕಾರಿಗಳಿಗೆ ಸನ್ಮಾನ

ಸುದ್ದಿದಿನ, ದಾವಣಗೆರೆ : “ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ(ಕೋಟಾ)-2003” ರ ಅಡಿಯಲ್ಲಿ ದಾವಣಗೆರೆ ನಗರ ಶೇಕಡಾ 90 ರಷ್ಟು ಅನುಷ್ಠಾನ ಹೊಂದಿರುವ ಪ್ರಯುಕ್ತ...

ದಿನದ ಸುದ್ದಿ8 hours ago

ಕೊರೊನಾ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ನಿಂತಿದೆ : ಸಚಿವ ಭೈರತಿ ಬಸವರಾಜ್

ಸುದ್ದಿದಿನ,ದಾವಣಗೆರೆ :1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೊರೊನಾದಂತಹ ಸಂದರ್ಭವನ್ನೂ ದೇಶ...

ದಿನದ ಸುದ್ದಿ9 hours ago

ಶಾಲೆಯ ಮಕ್ಕಳಿಗೆ ಸಂವಿಧಾನದ ಪಾಠ ಮಾಡಿದ ಟಗರು ಡಾಲಿ : ವೈರಲ್ ಆಯ್ತು ವಿಡಿಯೋ..!

ಸುದ್ದಿದಿನ ಡೆಸ್ಕ್ : ನಟ ಧನಂಜಯ ಕೇವಲ ನಟನಲ್ಲ ಅವರಲ್ಲೊಬ್ಬ ಸಾಮಾಜಿಕ ಕಳಕಳಿಯ ಹೋರಾಟಗಾರನೂ ಇದ್ದಾನೆ. ಪ್ರಸ್ತುತ ವಿದ್ಯಾಮಾಗಳಿಗೆ ತೀಕ್ಷ್ಣವಾಗಿ ಅವರು ಪ್ರತಿಕ್ರಿಯೆಗಳನ್ನು ತಮ್ಮ ಸಾಮಾಜಿಕ ಜಾಲತಾಣದ...

ದಿನದ ಸುದ್ದಿ18 hours ago

ಮರಳಿ ಸಿರಿ ಧಾನ್ಯ ಬೆಳೆಯಲು ರೈತರು ಮುಂದಾಗಿ : ಕಂದಾಯ ಸಚಿವ ಆರ್.ಅಶೋಕ್

ಸುದ್ದಿದಿನ ,ಬೆಂಗಳೂರು ಗ್ರಾಮಾಂತರ ಜಿಲ್ಲೆ : ಸಿರಿ ಧಾನ್ಯಗಳನ್ನು ಉಪಯೋಗಿಸುವುದರಿಂದ ಉತ್ತಮ ಆರೋಗ್ಯದ ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದ್ದು, ಮರಳಿ ರೈತರು ಸಿರಿಧಾನ್ಯಗಳನ್ನು ಬೆಳೆಯಲು ಮುಂದಾಗುವಂತೆ ಕಂದಾಯ ಹಾಗೂ ಬೆಂಗಳೂರು...

ದಿನದ ಸುದ್ದಿ1 day ago

ವಿಜಯನಗರ ಜಿಲ್ಲೆ ರಚನೆ; ಆಕ್ಷೇಪಣೆ ಪರಿಶೀಲಿಸಿ ಶೀಘ್ರ ನಿರ್ಣಯ: ಸಚಿವ ಆನಂದಸಿಂಗ್

ಸುದ್ದಿದಿನ,ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ 30ಸಾವಿರ ಆಕ್ಷೇಪಣೆಗಳು ಬಂದಿದ್ದು;ಅವುಗಳನ್ನು ಪರಿಶೀಲಿಸಿ ಜಿಲ್ಲೆ ರಚನೆ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್...

Trending