ದಿನದ ಸುದ್ದಿ
ಶಾಕಿಂಗ್ ನ್ಯೂಸ್: ಎರಡು ಲಕ್ಷ ಮಕ್ಕಳು ನಾಪತ್ತೆ

ಸುದ್ದಿದಿನ ಡೆಸ್ಕ್: ಸುಪ್ರೀಂ ಕೋರ್ಟ್‌ಗೆ ಎರಡು ಸರ್ಕಾರಗಳ ಸಲ್ಲಿರುವ ಸಮೀಕ್ಷಾ ವರದಿಯಲ್ಲಿ ಶಾಕಿಂಕ್ ನ್ಯೂಸ್ ಹೊರಬಿದ್ದಿದ್ದು, ದೇಶಾದ್ಯಂತ ಇರುವ ಸರ್ಕಾರಿ ನಿಲಯಗಳಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮಕ್ಕಳು ನಾಪತ್ತೆಯಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ. ಈಚೆಗಷ್ಟೇ ಉತ್ತರಪ್ರದೇಶದ ಬಾಲಕಿಯರ ನಿಲಯದಲ್ಲಿ ಅತ್ಯಾಚಾರ ಎಸಗಿ ಹೂತು ಹಾಕಿದ್ದ ಘಟನೆಯ ಬೆನ್ನಲ್ಲೇ ದೇಶವೇ ಶಾಂಕ್ ಆಗುವ ಮಾಹಿತಿ ಬಹಿರಂಗವಾಗಿದೆ.
ಕೇಂದ್ರ ಮಹಿಳಾ ಮಕ್ಕಳಾಭಿವೃದ್ಧಿ ಸಚಿವಾಲಯ 2016-17ನೇ ಸಾಲಿನಲ್ಲಿ ದೇಶಾದ್ಯಂತ ಇರುವ ಸರ್ಕಾರಿ ಮಕ್ಕಳ ನಿಲಯಗಳಲ್ಲಿ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿದೆ. ಈ ವರದಿಯ ಪ್ರಕಾರ 4.73 ಮಕ್ಕಳು ಸರ್ಕಾರಿ ನಿಲಯಗಳಲ್ಲಿ ವಾಸಿಸುತ್ತಿರುವುದಾಗಿ ದಾಖಲಾಗಿದೆ. ಆದರೆ, ಸುಪ್ರೀಂ ಕೋರ್ಟ್‌ಗೆ ಮಾರ್ಚ್‌ನಲ್ಲಿ ಕೇಂದ್ರ ಸಲ್ಲಿಸಿದ ವರದಿಯಲ್ಲಿ 2.61 ಮಕ್ಕಳು ಕಡಿಮೆಯಾಗಿರುವ ಅಂಶ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಕೇಂದ್ರವು ರಾಜ್ಯ ಸರ್ಕಾರಗಳಿಂದ ಪಡೆದುಕೊಂಡಿದೆ.
ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕೂರ್, ಎಸ್. ಅಬ್ದುಲ್ ನಜೀರ್, ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ, ಬಹಳ ಗೊಂದಲಕ್ಕೀಡಾಗಿದ್ದು, ಮಕ್ಕಳು ಕೇವಲ ಅಂಕಿಗಳಲ್ಲ, ವರದಿಯಲ್ಲಿ ಅಂಶಗಳು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಮಕ್ಕಳನ್ನು ಕೇವಲ ಅಂಕಿಗಳಂತೆ ಪರಿಗಣಿಸಿರುವುದು ನಮಗೆ ನೋವು ತಂದಿದೆ. ಅವರಿಗೂ ಹೃದಯವಿದೆ, ಅವರಿಗೂ ಮನಸ್ಸಿದೆ ಎಂದು ಹೇಳಿ ತಾರತಮ್ಯವನ್ನು ಎತ್ತಿಹಿಡಿದಿದೆ.
ಹಣದಾಸೆಗಾಗಿ ನಿಲಯಗಳು ಸುಳ್ಳು ಮಾಹಿತಿ ನೀಡಿವೆಯೋ ಅಥವಾ ಏನು ಮಾಡಿವೆಯೋ ನಮಗೆ ತಿಳಿಯುತ್ತಿಲ್ಲ.
ನ್ಯಾಯಮೂರ್ತಿ ಲೋಕೂರ್
ದೇಶದಲ್ಲಿ ಇರುವ 9,589 ಶಿಶುಪಾಲನಾ ಸಂಸ್ಥೆಗಳಿವೆ. 1,596 ಶಿಶುಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸಂಖ್ಯೆ ಮೀತಿ ಮೀರಿದೆ. 97 ಜಿಲ್ಲೆಗಳಲ್ಲಿ ಶಿಶುಪಾಲನಾ ಸಂಸ್ಥೆಗಳಿಲ್ಲ. ಈ ನಿಲಯಗಳಲ್ಲಿ ಎಷ್ಟು ಮಕ್ಕಳ ಮೇಲೆ ದೈಹಿಕ ಹಲ್ಲೆ ಸೇರಿ ಇತರ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತಿದೆ. ಈ ಎರಡು ಲಕ್ಷ ಮಕ್ಕಳನ್ನು ಹೊರತುಪಡಿಸಿ ದೇಶದಲ್ಲಿ ಇನ್ನು ಎಷ್ಟು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ನೀಡುವಂತೆ ಸರ್ಕಾರಿ ಅಧಕಾರಿಗಳನ್ನು ಸುಪ್ರೀಂ ಕೋರ್ಟ್ ಸಮಜಾಷಿಸಿದೆ.
ಶಿಶುಪಾಲನಾ ಮಂದಿರಗಳ ಮೇಲೆ ನಿಗಾ ಇಡಲು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿ ರಚನೆ ಕುರಿತು ನ್ಯಾಯಪೀಠ ಪ್ರಸ್ತಾಪ ಮಾಡಿದ್ದು, ಕೇಂದ್ರದ ಸಲಹೆ, ಸೂಚನೆಗಳನ್ನು ಪಡೆಯಲು ಸಮಯ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.
ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್‌ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಗಿಗೆ ಪ್ರತಿ ಕ್ವಿಂಟಲ್‌ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್‌ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್‌ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್‌ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ6 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ