Connect with us

ದಿನದ ಸುದ್ದಿ

ರಾಜ್ಯದಲ್ಲಿ ಶಾಪಿಂಗ್ ಮಾಲ್ ಗಳು ಓಪನ್ ; ಮಾರ್ಗಸೂಚಿಯಲ್ಲಿ ಏನೇನಿದೆ..!? ಮಿಸ್ ಮಾಡ್ದೆ ಓದಿ ಈ‌ ಸುದ್ದಿ

Published

on

ಸುದ್ದಿದಿನ,ಬೆಂಗಳೂರು: ಸರ್ಕಾರವು ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್‍ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್‍ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.

ಈ ಹಿಂದೆಯೇ ಜೂನ್ 8ರಿಂದ ಮಾಲ್‍ಗಳನ್ನು ಓಪನ್ ಮಾಡಲಾಗುವುದು ಎಂದು ಹೇಳಲಾಗಿತ್ತು. ಅಂತೆಯೇ ಸರ್ಕಾರ ಈ ತೀರ್ಮಾನ ಮಾಡಿದ್ದು, 65 ವರ್ಷದೊಳಗಿನ ವೃದ್ಧರು ಹಾಗೂ 10 ವರ್ಷದೊಳಗಿನ ಮಕ್ಕಳು ಮಾಲ್‍ಗಳಿಗೆ ಪ್ರವೇಶಿಸುವಂತಿಲ್ಲ. ಜೊತೆಗೆ ಪ್ರತಿಯೊಬ್ಬರೂ ಕೂಡ 6 ಅಡಿಯಷ್ಟು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಎಂಬ ಷರತ್ತು ವಿಧಿಸಿದೆ.

ಮಾರ್ಗಸೂಚಿಯಲ್ಲಿ‌ ಏನೇನಿದೆ..!?

  1. ಮಾಲ್ ಪ್ರವೇಶಿಸುವ ಅಂಗಡಿಗಳ ನೌಕರರು, ಮಾಲ್ ಕೆಲಸಗಾರರು, ಗ್ರಾಹಕರು, ಸಿಬ್ಬಂದಿಗೆ ಫೇಸ್ ಮಾಸ್ಕ್ ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
  2. ಸಾಮಾಜಿಕ ಅಂತರ ನಿಯಮ ಪಾಲಿಸಲು ಸಿಬ್ಬಂದಿ ನೇಮಿಸಬೇಕು.
  3. ವೃದ್ಧ ನೌಕಕರು, ಗರ್ಭಿಣಿ ಕೆಲಸಗಾರು ಕೆಲಸಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಜೊತೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಬೇಕು.
  4. ಪಾರ್ಕಿಂಗ್ ಮತ್ತು ಮಾಲ್ ಆವರಣದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ನಿಭಾಯಿಸಬೇಕು.
  5. ಪಾರ್ಕಿಂಗ್ ಸಿಬ್ಬಂದಿಗೆ ಮಾಸ್ಕ್, ಗ್ಲವ್ಸ್ ಬಳಕೆ ಕಡ್ಡಾಯವಾಗಿರಬೇಕು.
  6. ಮಾಲ್ ಒಳಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
  7. ಸೀಮಿತ ಜನರ ಪ್ರವೇಶಕ್ಕೆ ಆದ್ಯತೆ ನೀಡಬಹುದು. ಎಸ್ಕಲೇಟರ್‍ನಲ್ಲಿ ಒಂದು ಮೆಟ್ಟಿಲು ನಡುವೆ ಅಂತರ ಕಾಪಾಡಿಕೊಳ್ಳಬೇಕು.
  8. ಎಸಿ ಅವಶ್ಯಕ ಇದ್ದರೆ 24-30 ಡಿಗ್ರಿ ಬಳಕೆ ಮಾಡಬಹುದು, ಇಲ್ಲದಿದ್ದರೆ ನೈಸರ್ಗಿಕ ಗಾಳಿಗೆ ಒತ್ತು ನೀಡಬೇಕು.
  9. ದೊಡ್ಡ ಪ್ರಮಾಣ ಜನ ಸೇರಿ ಪಾರ್ಟಿ ಸಭೆ ಮಾಡುವಂತಿಲ್ಲ.
  10. ಮಾಲ್‍ನಲ್ಲಿ ಬಳಕೆಯಾದ ಎಲ್ಲ ವಸ್ತುಗಳನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಬೇಕು.
  11. ಶೌಚಾಲಯಗಳನ್ನು ಆಗ್ಗಾಗ್ಗೆ ಸ್ವಚ್ಛ ಮಾಡಬೇಕು. ಫುಡ್ ಕೋರ್ಟ್ ನಲ್ಲಿ ಅಂತರ ಕಾಯ್ದುಕೊಳ್ಳಬೇಕು.
  12. ಮಾಲ್‍ನಲ್ಲಿರಿವ ರೆಸ್ಟೋರೆಂಟ್ ನಲ್ಲಿ ಶೇ.50 ಸಾರ್ಮಥ್ಯಕ್ಕೆ ಅವಕಾಶ ನೀಡಬೇಕು.
  13. ಜೊತೆಗೆ ಕೂರುವಾಗ ಅಂತರವಿರಬೇಕು.
  14. ಪ್ರತಿ ಗ್ರಾಹಕರು ಬದಲಾದ ಮೇಲೆ ಟೇಬಲ್ ಸ್ಯಾನಿಟೈಜ್ ಮಾಡಬೇಕು.
  15. ಕಿಚನ್‍ನಲ್ಲೂ ಅಂತರ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.
  16. ಮಾಲ್‍ನಲ್ಲಿರುವ ಗೇಮಿಂಗ್ ಸೆಂಟರ್, ಮಕ್ಕಳ ಆಟದ ಪ್ರದೇಶ, ಸಿನಿಮಾ ಮಂದಿರ ಬಂದ್ ಆಗಬೇಕು.
  17. ಒಂದು ವೇಳೆ ಮಾಲ್‍ನಲ್ಲಿ ಸೋಂಕು ಪತ್ತೆಯಾದರೆ ಸೋಂಕಿತ ಓಡಾಡಿದ ಪ್ರದೇಶ ಐಸೋಲೇಟ್ ಮಾಡಬೇಕು.
  18. ಜೊತೆಗೆ ಹತ್ತಿರದ ಆರೋಗ್ಯ ಇಲಾಖೆ ಮಾಹಿತಿ ನೀಡಬೇಕು.

ಎಂದು ಮಾರ್ಗ ಸೂಚಿಯಲ್ಲಿ ವಿವರಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending