ದಿನದ ಸುದ್ದಿ
ಭಾರತದ ಶ್ರೇಷ್ಠ ಪರಂಪರೆಯನ್ನು ವಿಶ್ವಕ್ಕೆ ಪ್ರದರ್ಶಿಸಬೇಕು| ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ ಡೆಸ್ಕ್ | ಪ್ರಧಾನಿ ನರೇಂದ್ರಮೋದಿ ಅವರಿಂದು ನವದೆಹಲಿಯ ತಿಲಕ್ ಮಾರ್ಗ್ ನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನೂತನ ಕೇಂದ್ರ ಕಚೇರಿ ಕಟ್ಟಡ – ಧರೋಹರ್ ಭವನವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 150ವರ್ಷಗಳ ಅವಧಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಗಣನೀಯ ಸೇವೆ ಮಾಡಿದೆ ಎಂದು ಹೇಳಿದರು.
ನಮ್ಮ ಇತಿಹಾಸ, ನಮ್ಮ ಶ್ರೀಮಂತ ಪುರಾತತ್ವ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕಾದ ಮಹತ್ವವನ್ನು ಪ್ರಧಾನಿ ಪ್ರತಿಪಾದಿಸಿದರು. ಸ್ಥಳೀಯ ಇತಿಹಾಸ ಮತ್ತು ತಮ್ಮ ಪಟ್ಟಣ, ನಗರ ಮತ್ತು ವಲಯದ ಪುರಾತತ್ವದ ಬಗ್ಗೆ ಜನರು ತಿಳಿಯಲು ಮುಂದಾಗಬೇಕು ಎಂದರು. ಸ್ಥಳೀಯ ಪುರಾತತ್ವಶಾಸ್ತ್ರ ಶಾಲಾ ಪಠ್ಯಕ್ರಮದ ಭಾಗವಾಗಬೇಕು ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ, ಉತ್ತಮವಾಗಿ ತರಬೇತಿ ಹೊಂದಿದ ಸ್ಥಳೀಯ ಪ್ರವಾಸಿ ಮಾರ್ಗದರ್ಶಕರ ಮಹತ್ವವನ್ನು ಪ್ರಸ್ತಾಪಿಸಿ, ಅವರು ತಮ್ಮ ಪ್ರದೇಶದ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಹೆಚ್ಚು ಅರಿತಿರುತ್ತಾರೆ ಎಂದರು.
ಪ್ರತಿಯೊಂದು ಪುರಾತತ್ವ ಸಂಶೋಧನೆಯನ್ನೂ ಪುರಾತತ್ವಶಾಸ್ತ್ರಜ್ಞರು ದೀರ್ಘ ಸಮಯದವರೆಗೆ ನೋವನುಭವಿಸಿ ಮಾಡಿರುತ್ತಾರೆ ಅದು ತನ್ನದೇ ಕಥೆಯನ್ನು ಸಾರುತ್ತದೆ ಎಂದರು. ಈ ನಿಟ್ಟಿನಲ್ಲಿ, ಭಾರತ ಮತ್ತು ಫ್ರೆಂಚ್ ತಂಡ ಜಂಟಿಯಾಗಿ ಮಾಡಿದ್ದ ಪುರಾತತ್ವ ಅನ್ವೇಷಣೆಯ ಖುದ್ದು ಮಾಹಿತಿ ಪಡೆಯಲು ತಾವು ಮತ್ತು ಅಂದಿನ ಫ್ರೆಂಚ್ ಅಧ್ಯಕ್ಷರು ಕೆಲವು ವರ್ಷಗಳ ಹಿಂದೆ ಚಂಡೀಗಢಕ್ಕೆ ಪ್ರಯಾಣ ಮಾಡಿದ್ದನ್ನು ಸ್ಮರಿಸಿದರು.
ಭಾರತವು ಹೆಮ್ಮೆ ಮತ್ತು ವಿಶ್ವಾಸದೊಂದಿಗೆ ತನ್ನ ಶ್ರೇಷ್ಠ ಪರಂಪರೆಯನ್ನು ವಿಶ್ವಕ್ಕೆ ಪ್ರದರ್ಶಿಸಬೇಕು ಎಂದು ಪ್ರಧಾನಿ ಹೇಳಿದರು.
ಎ.ಎಸ್.ಐ.ನ ನೂತನ ಕೇಂದ್ರ ಕಚೇರಿ ಕಟ್ಟಡವು ಇಂಧನ ದಕ್ಷತೆಯ ವಿದ್ಯುತ್ ದೀಪ ಮತ್ತು ಮಳೆ ನೀರು ಕೊಯ್ಲು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಇದರಲ್ಲಿ 1.5 ಲಕ್ಷ ಪುಸ್ತಕ ಮತ್ತು ನಿಯತಕಾಲಿಕಗಳನ್ನು ಒಳಗೊಂಡ ಕೇಂದ್ರೀಯ ಪುರಾತತ್ವ ಗ್ರಂಥಾಲಯವೂ ಸೇರಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9985715401
ದಿನದ ಸುದ್ದಿ
ದಾವಣಗೆರೆ | ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಬುಧವಾರ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚುನಾವಣಾ ತಹಶೀಲ್ದಾರ್ ಪ್ರಸಾದ್ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತ ಪರೇಡ್ ವೇಳೆ ಅಹಿತಕರ ಘಟನೆ ; ಹೋರಾಟದಿಂದ ಹಿಂದೆ ಸರಿದ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ

ಸುದ್ದಿದಿನ,ನವದೆಹಲಿ : ಗಣರಾಜ್ಯೊತ್ಸವ ದಿನದಂದು ದೆಹಲಿಯಲ್ಲಿ ರೈತ ಪರೇಡ್ ವೇಳೆ ನಡೆದ ಅಹಿತಕರ ಬೆಳವಣಿಗೆಯಿಂದ ಬೇಸರಗೊಂಡಿರುವ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹೋರಾಟದಿಂದ ಹಿಂದೆ ಸರಿದಿದೆ.
ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹಾಗೂ
ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರೂ ಆಗಿರುವ ವಿ ಎಂ ಸಿಂಗ್ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿ ಈ ವಿಷಯ ಪ್ರಕಟಿಸಿದ್ದಾರೆ.
ಭಿನ್ನ ಉದ್ದೇಶವಿರುವವರೊಂದಿಗೆ ನಾವು ಹೋರಾಟ ಮುಂದುವರೆಸಲು ಸಾಧ್ಯವಿಲ್ಲವೆಂದು ವಿ ಎಂ ಸಿಂಗ್ ಹೇಳಿದ್ದಾರೆ.
ಮಂಗಳವಾರ ನಡೆದ ಬೆಳವಣಿಗೆಗಳು, ರೈತ ಮುಖಂಡರ ವಿರುದ್ಧ ಎಫ್ಐಆರ್ ದಾಖಲೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ 7 ಗಂಟೆಗೆ ಕಿಸಾನ್ ಏಕ್ತಾ ಮೋರ್ಚಾ ಪತ್ರಿಕಾಗೋಷ್ಠಿ ಕರೆದಿದೆ.
Delhi: Farmers protest against Rashtriya Kisan Mazdoor Sangathan leader VM Singh following his announcement to withdraw from the agitation.
Visuals from Ghazipur border. https://t.co/CYKZoH9y4y pic.twitter.com/MEhgOIOxkl
— ANI (@ANI) January 27, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಮ ಪಂಚಾಯತಿ ಸದಸ್ಯರಿಗೆ ಹೂವಿನಹೊಳೆ ಪ್ರತಿಷ್ಠಾನ ಗೌರವ ಸದಸ್ಯತ್ವ ಪ್ರದಾನ : ಹಂಚಗುಳಿ ಗ್ರಾಮ ರಾಜ್ಯಕ್ಕೆ ಮಾದರಿ

ಸುದ್ದಿದಿನ, ರಾಮನಗರ : ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಹಂಚಗುಳಿ ಗ್ರಾಮದಿಂದ ಆಯ್ಕೆಯಾದ ಸದಸ್ಯರಾದ ಮಲ್ಲೇಶ್ ಹಾಗೂ ಶಾಂತಮ್ಮ ಅವರಿಗೆ ”ಹೂವಿನಹೊಳೆ ಪ್ರತಿಷ್ಠಾನದ ಐದು ವರ್ಷಗಳ ಗೌರವ ಸದಸ್ಯತ್ವ” ಪ್ರದಾನ ಮಾಡಲಾಯಿತು ಇದೇ ಸಂದರ್ಭದಲ್ಲಿ ನಮ್ನೂರಿಗೆ ನಮ್ಮ ಉಸಿರು ಬಳಗದಿಂದ ಹಂಚಗುಳಿ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮುನುಚ್ಚೆಗೌಡರು ಉದ್ಘಾಟನೆ ಮಾಡಿ ಮಾತನಾಡುತ್ತಾ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಶಾಲೆಗಳನ್ನು ಕರ್ನಾಟಕ ಸರ್ಕಾರಿ ಪಬ್ಲಿಕ್ ಶಾಲೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಗ್ರಾ.ಪ. ಸದಸ್ಯರಿಗೆ ಗೌರವ ಸದಸ್ಯತ್ವ ಪ್ರದಾನ ಮಾಡಿ ಮುಂದಿನ ಐದು ವರ್ಷಗಳಲ್ಲಿ ಹಂಚಗುಳಿ ಗ್ರಾಮದಲ್ಲಿ ನಾವು ಕೆಲಸ ಮಾಡಲು ಹಾಗೂ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಶ್ರಮಿಸುತ್ತೆವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಟಿ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ದಿಲೀಪ್ ಕುಮಾರ್ ಮಾತನಾಡಿ ಶಿಕ್ಷಣ ಎಲ್ಲರ ಹಕ್ಕು ಪ್ರತಿ ಗ್ರಾಮದ ಯುವಕರಿಗೂ ಉನ್ನತ ಕೆಲಸ ಸಿಗುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿ ನಾಯ್ಕಲ್ ದೊಡ್ಡಿ ಚಂದ್ರಶೇಖರ್, ಪ್ರಧಾನ ಸಂಚಾಲಕರಾದ ಹಂಚಗುಳಿ ಗಿರೀಶ್ ,ಸುನೀಲ್ ಕುಮಾರ್,ರಾಜಣ್ಣ ಹಾಗೂ ಗ್ರಾಮದ ಮುಖಂಡರಾದ,ಚೆಲುವರಾಜು, ಚಿಕೈದೆಗೌಡ, ಸುಂದ್ರೆಶ್, ಮಣಿಕಂಠ, ಮುತ್ತುರಾಜು,ಭಾಸ್ಕರ್, ಶಿವಕುಮಾರ್ ಅರ್ಚಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ1 day ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ1 day ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ದಿನದ ಸುದ್ದಿ2 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ಬಹಿರಂಗ3 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ದಿನದ ಸುದ್ದಿ1 day ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ
-
ದಿನದ ಸುದ್ದಿ1 day ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ
-
ಅಂತರಂಗ1 day ago
ಭಾರತದ ಸಂವಿಧಾನ : ಪ್ರಜೆಗಳ ಓದು