ದಿನದ ಸುದ್ದಿ
ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ : ಶ್ರೀರಾಮುಲು
ಸುದ್ದಿದಿನ, ಬಳ್ಳಾರಿ : ಪಕ್ಷ ತಾಯಿ ಇದ್ದಂತೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ, ಕೆಲಸ ಮಾಡಬೇಕಾಗಿದೆ. ಹೀಗಾಗಿ ಯಾರು ಕೂಡ ಯಾವುದೇ ಪ್ರತಿಭಟನೆ ಮಾಡಬಾರದು. ಪಕ್ಷಕ್ಕಾಗಿ ಎಲ್ಲರೂ ದುಡಿಯೋಣ. ಎಲ್ಲರಿಗೆ ನ್ಯಾಯ ಕೊಡಿಸುವ ಕೆಲಸ ನಾನು ಸೇರಿದಂತೆ ಬಿಜೆಪಿ ಪಕ್ಷ ಮಾಡುತ್ತದೆ. ಹೀಗಾಗಿ ಪಕ್ಷಕ್ಕೆ ಮುಜುಗರ ತರುವ ಕೆಲಸ ಯಾರು ಮಾಡಬೇಡಿ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಬುಧವಾರ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ಕೊಡುವ ಕೆಲಸ ಆಗಬೇಕಿದೆ. ಸಿಎಂ ಯಡಿಯೂರಪ್ಪನವರು ಈ ಕುರಿತು ಭರವಸೆ ನೀಡಿದ್ದಾರೆ. ಮೀಸಲಾತಿ ಸೌಲಭ್ಯ ಸಿಕ್ಕರೆ ವಾಲ್ಮೀಕಿ ಸಮುದಾಯಕ್ಕೆ ಎಲ್ಲವೂ ಸಿಕ್ಕಂತಾಗುತ್ತದೆ. ಈ ಬಗ್ಗೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಶಿವನಗೌಡ ನಾಯಕ, ರಾಜೂಗೌಡ ಎಲ್ಲರ ಅಭಿಪ್ರಾಯವೂ ಒಂದೇ ಆಗಿದೆ ಎಂದು ಅಭಿಪ್ರಯಪಟ್ಟರು.
ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯ ನಾನು ನೆರೆ ಪೀಡಿತ ಪ್ರದೇಶಾಭಿವೃದ್ಧಿಗೆ ಬಳ್ಳಾರಿ, ರಾಯಚೂರು ಯಾದಗಿರಿ ಜಿಲ್ಲೆಗಳ ಉಸ್ತುವಾರಿಯಾಗಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243