ರಾಜಕೀಯ
ಎಚ್ಡಿಕೆ ಸರ್ಕಾರದಿಂದ ಲೂಟಿ ನಡೆತಿದೆ ಎಂದು ಗಂಭೀರ ಆರೋಪ ಮಾಡಿದ ಆ ಶಾಸಕ ಯಾರು !?
ಸುದ್ದಿದಿನ ಡೆಸ್ಕ್: ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ಲೋಟಿ ನಡೆಯುತ್ತಿದೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ.
ಸದ್ಯ ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದ್ದು, ಕೋಟ್ಯಂತರ ರೂಪಾಯಿ ಲಂಚ ನಡೆಯುತ್ತಿದೆ.ಅಧಿಕಾರಿಗಳು ಸೂಟ್ ಕೇಸ್ ಹಿಡಿದುಕೊಂಡು ಅಲೆಯುವ ಪರಿಸ್ಥಿತಿಯಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಹಾಗಾಗಿ ಲೂಟಿ ಮಾಡುವುದು ಹೆಚ್ಚಿದೆ ಎಂದು ಬಳ್ಳಾರಿಯಲ್ಲಿ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ.
ತೆಲಂಗಾಣ ಮಾದರಿಯಲ್ಲಿ ಹೋರಾಟದ ಎಚ್ಚರಿಕೆ
ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಆದ್ದರಿಂದ ತೆಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಚಿಂತನೆ ನಡೆಸಲಾಗುತ್ತದೆ. ಬಳ್ಳಾರಿ ಭಾಗದ ಶಾಸಕರ ಬಳಿ ಚರ್ಚೆ ನಡೆಯುತ್ತಿದೆ ಎಂದು ಹೊಸ ಬಾಂಬ್ ಸ್ಫೋಟಿಸಿದ್ದಾರೆ.