ದಿನದ ಸುದ್ದಿ

ಕೊರೋನಾ ಸಂದರ್ಭದಲ್ಲಿ ಬಡವರನ್ನು ಬದುಕಿಸಿದ್ದು ನರೇಗಾ ಮತ್ತು ಅನ್ನಭಾಗ್ಯ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೇವಲ ಭಾಷಣಗಳಿಂದ ಸಮಾಜದ ಆಶಯ ಈಡೇರುವುದಿಲ್ಲ ಎಂದು ತಿಳಿಸಿದರು.

ಹಬ್ಬ ಬಂದಾಗ ಮಾತ್ರ ಮನೆಯಲ್ಲಿ ಅನ್ನ ಮಾಡುತ್ತಿದ್ದು, ಹೀಗಾಗಿ ಅನ್ನಕ್ಕೆ ಯಾರೂ ಕಾಯಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತರಲಾಗಿದೆ ಎಂದು ಸ್ಮರಿಸಿದರು. ಜಾತಿ ಕಾರಣದಿಂದ ಸಮಾಜದಲ್ಲಿ ಆರ್ಥಿಕ ಅಸಮಾನತೆ ಸೃಷ್ಟಿ ಆಯಿತು. ಹೀಗಾಗಿ ಎಲ್ಲರಿಗೂ ಆರ್ಥಿಕ ಶಕ್ತಿ ನೀಡುವ ಕಾರಣಕ್ಕೆ ಎರಡನೇ ಬಾರಿ ಮುಖ್ಯಮಂತ್ರಿ ಆದ ಮೇಲೆ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ಮನ್ರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version