ರಾಜಕೀಯ

ವಿಧಾನಮಂಡಲದ ಅಧಿವೇಶನ ಅವಧಿ ವಿಸ್ತರಿಸಲು ಕೋರಿ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನ ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಮೂರು ವಾರಗಳ ಕಾಲ ಅಂದರೆ ಅ.15ರ ವರೆಗೆ ವಿಸ್ತರಿಸಬೇಕೆಂದು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದು ಮಾಜಿಮುಖ್ಯಂಮತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಅಧಿವೇಶನದಲ್ಲಿ 35ಕ್ಕಿಂತ ಹೆಚ್ಚು ಮಸೂದೆ ಮಂಡನೆಯಾಗಲಿದೆ, ಇದರ ಜೊತೆಗೆ ಕೊರೊನಾ, ಅತಿವೃಷ್ಟಿ, ಹದಗೆಟ್ಟಿರುವ ಆರ್ಥಿಕ ಸ್ಥಿತಿ, ಡ್ರಗ್ಸ್ ಹಗರಣ ಹೀಗೆ ವಿಸ್ತೃತ ಚರ್ಚೆಗೆ ಸಾಕಷ್ಟು ವಿಷಯಗಳಿವೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3ರಂತೆ ವರ್ಷದಲ್ಲಿ ಕಡ್ಡಾಯವಾಗಿ ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ನಿಯಮವನ್ನು ಗಾಳಿಗೆ ತೂರಿ ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಿರುವುದು ಸಂಸದೀಯ ವ್ಯವಸ್ಥೆಗೆ ಮಾಡುತ್ತಿರುವ ಅಪಚಾರ ಎಂದು ಕಿಡಿಕಾರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version