ದಿನದ ಸುದ್ದಿ
ರಾಜ್ಯ ಬಿಜೆಪಿ ಸರ್ಕಾರ ಇನ್ನಷ್ಟು ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ : ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಇಂದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಕಾಂಗ್ರೆಸ್ ಪಕ್ಷ ರಾಜಕೀಯಕ್ಕಷ್ಟೇ ಸೀಮಿತವಲ್ಲ, ಇದೊಂದು ಚಳವಳಿ. ದೇಶದ ಸ್ವಾತಂತ್ರ್ಯಕ್ಕಾಗಿ ಆರಂಭಗೊಂಡ ಕಾಂಗ್ರೆಸ್ ಎಂಬ ಚಳವಳಿ ಇಂದು ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯಾತೀತತೆಯ ಸ್ಥಾಪನೆಗಾಗಿ ನಿರಂತರವಾಗಿದೆ. ಈ ಸಿದ್ಧಾಂತಗಳನ್ನು ಬೆಂಬಲಿಸುವ ಎಲ್ಲಾ ಮನಸ್ಸುಗಳು ಈ ವೇಳೆ ಒಂದಾಗಬೇಕು ಎಂದರು.
ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರೋದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ ಎಂದು ಹೇಳಿದರು.
ದೇಶದ ಇತರ ಎಲ್ಲಾ ರಾಜಕೀಯ ಪಕ್ಷಗಳಿಗೂ ಕಾಂಗ್ರೆಸ್ ಮಾತೃಪಕ್ಷ. ಅದು ರಾಷ್ಟ್ರೀಯ ಪಕ್ಷವೇ ಆಗಿರಲಿ ಅಥವಾ ಪ್ರಾದೇಶಿಕ ಪಕ್ಷಗಳೇ ಆಗಿರಲಿ. ಅವು ಒಂದಲ್ಲಾ ಒಂದು ರೀತಿ ಕಾಂಗ್ರೆಸ್ ಪಕ್ಷದ ಮೂಲದಿಂದಲೇ ಅಸ್ತಿತ್ವಕ್ಕೆ ಬಂದಿವೆ. ಹಾಗಾಗಿಯೇ ದೇಶದ ಉದ್ದಗಲಕ್ಕೂ ಕಾರ್ಯಕರ್ತರನ್ನು ಹೊಂದಿರುವ ಏಕೈಕ ಪಕ್ಷವೆಂಬ ಹೆಗ್ಗಳಿಕೆ ನಮಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್ಟಿ ಪರಿಹಾರ ಸೇರಿ ಹೆಚ್ಚಿನ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈ ವರೆಗೆ ಮಾತನಾಡಿಲ್ಲ. ಹೀಗಾಗಿ ರಾಜ್ಯ ಬಿಜೆಪಿ ಸರ್ಕಾರ ಇನ್ನಷ್ಟು ಸಾಲ ರಾಜ್ಯ ಬಿಜೆಪಿ ಸರ್ಕಾರ ಇನ್ನಷ್ಟು ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ.ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದು ಕಿಡಿಕಾರಿದರು.
ಮಾರ್ಚ್ 9ರಂದು ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣವಿತ್ತು, ಇಂದು 5 ಲಕ್ಷಕ್ಕಿಂತ ಹೆಚ್ಚು ಕೇಸ್ ದಾಖಲಾಗಿವೆ. ಆದರೂ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕ ಬೇರೆಲ್ಲಾ ರಾಜ್ಯಗಳಿಗಿಂತ ಬೆಟರ್ ಅಂತಿದಾರೆ. ಅಂದ್ರೆ ಅವರು ಇದಕ್ಕಿಂತ ಕೆಟ್ಟ ಪರಿಸ್ಥಿತಿ ನಿರೀಕ್ಷಿಸಿದ್ದರು ಅಂತನಾ? ಎಂದು ಪ್ರಶ್ನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ12 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ11 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

