ದಿನದ ಸುದ್ದಿ

ರಾಜ್ಯ ಬಿಜೆಪಿ ಸರ್ಕಾರ ಇನ್ನಷ್ಟು ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಕಾಂಗ್ರೆಸ್ ಪಕ್ಷ ರಾಜಕೀಯಕ್ಕಷ್ಟೇ ಸೀಮಿತವಲ್ಲ, ಇದೊಂದು ಚಳವಳಿ. ದೇಶದ ಸ್ವಾತಂತ್ರ್ಯಕ್ಕಾಗಿ ಆರಂಭಗೊಂಡ ಕಾಂಗ್ರೆಸ್‌ ಎಂಬ ಚಳವಳಿ ಇಂದು ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯಾತೀತತೆಯ ಸ್ಥಾಪನೆಗಾಗಿ ನಿರಂತರವಾಗಿದೆ. ಈ ಸಿದ್ಧಾಂತಗಳನ್ನು ಬೆಂಬಲಿಸುವ ಎಲ್ಲಾ ಮನಸ್ಸುಗಳು ಈ ವೇಳೆ ಒಂದಾಗಬೇಕು ಎಂದರು.

ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರೋದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ ಎಂದು ಹೇಳಿದರು.

ದೇಶದ ಇತರ ಎಲ್ಲಾ ರಾಜಕೀಯ ಪಕ್ಷಗಳಿಗೂ ಕಾಂಗ್ರೆಸ್ ಮಾತೃಪಕ್ಷ. ಅದು ರಾಷ್ಟ್ರೀಯ ಪಕ್ಷವೇ ಆಗಿರಲಿ ಅಥವಾ ಪ್ರಾದೇಶಿಕ ಪಕ್ಷಗಳೇ ಆಗಿರಲಿ. ಅವು ಒಂದಲ್ಲಾ ಒಂದು ರೀತಿ ಕಾಂಗ್ರೆಸ್ ಪಕ್ಷದ ಮೂಲದಿಂದಲೇ ಅಸ್ತಿತ್ವಕ್ಕೆ ಬಂದಿವೆ. ಹಾಗಾಗಿಯೇ ದೇಶದ ಉದ್ದಗಲಕ್ಕೂ ಕಾರ್ಯಕರ್ತರನ್ನು ಹೊಂದಿರುವ ಏಕೈಕ ಪಕ್ಷವೆಂಬ ಹೆಗ್ಗಳಿಕೆ ನಮಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್‌ಟಿ ಪರಿಹಾರ ಸೇರಿ ಹೆಚ್ಚಿನ‌ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈ ವರೆಗೆ ಮಾತನಾಡಿಲ್ಲ. ಹೀಗಾಗಿ ರಾಜ್ಯ ಬಿಜೆಪಿ ಸರ್ಕಾರ ಇನ್ನಷ್ಟು ಸಾಲ ರಾಜ್ಯ ಬಿಜೆಪಿ ಸರ್ಕಾರ ಇನ್ನಷ್ಟು ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ.ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದು ಕಿಡಿಕಾರಿದರು.

ಮಾರ್ಚ್ 9ರಂದು ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣವಿತ್ತು, ಇಂದು 5 ಲಕ್ಷಕ್ಕಿಂತ ಹೆಚ್ಚು ಕೇಸ್ ದಾಖಲಾಗಿವೆ. ಆದರೂ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕ ಬೇರೆಲ್ಲಾ ರಾಜ್ಯಗಳಿಗಿಂತ ಬೆಟರ್ ಅಂತಿದಾರೆ. ಅಂದ್ರೆ ಅವರು ಇದಕ್ಕಿಂತ ಕೆಟ್ಟ ಪರಿಸ್ಥಿತಿ ನಿರೀಕ್ಷಿಸಿದ್ದರು ಅಂತನಾ? ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version