ದಿನದ ಸುದ್ದಿ

ಬೊಮ್ಮಾಯಿಯವರೇ, ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ : ಮಾಜಿ‌ ಸಿಎಂ ಸಿದ್ದರಾಮಯ್ಯ ‌ಕಿಡಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ.

ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು‌ ಮಾಜಿ‌ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು.
10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ.
ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version