ದಿನದ ಸುದ್ದಿ
ಯಡಿಯೂರಪ್ಪ ಸಿಎಂ ಪಟ್ಟದಿಂದ ಇಳಿಯೋದು ಖಾಯಂ : ಸಿದ್ದರಾಮಯ್ಯ
ಸುದ್ದಿದಿನ,ಮೈಸೂರು: ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸಂಪೂರ್ಣ ಕೊರೊನಾ ಮುಕ್ತವಾಗುವವರೆಗೆ ಶಾಲೆ ಆರಂಭಿಸುವುದು ಬೇಡ. ಈ ವರ್ಷ ಎಲ್ಲಾ ತರಗತಿಗಳಿಗೆ ಆನ್‌ಲೈನ್ ಮೂಲಕ ಪಾಠ ಮಾಡಿ, ಎಲ್ಲರನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಿ. ಸರ್ಕಾರ ಶಾಲೆ ತೆರೆಯುವ ದುಸ್ಸಾಹಸ ಮಾಡುವುದು ಬೇಡ ಎಂದರು.
ಶಿರಾ ಹಾಗೂ ಆರ್.ಆರ್ ನಗರ ಎರಡೂ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ರಾಜ್ಯಾದ್ಯಂತ ಆಡಳಿತ ವಿರೋಧಿ ಅಲೆಯಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಕಾನೂನುಗಳಿಂದ ಜನ ಬೇಸತ್ತಿದ್ದಾರೆ. ಅವೆಲ್ಲಾ ಕಾಂಗ್ರೆಸ್ ಮತಗಳಾಗಿ ಪರಿವರ್ತನೆಯಾಗಿವೆ ಭರವಸೆ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243