ದಿನದ ಸುದ್ದಿ

ಡಿ.ಜೆ ಹಳ್ಳಿ ಗಲಭೆ | ನೈಜ ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ

Published

on

ಸುದ್ದಿದಿನ.ಬೆಂಗಳೂರು: ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್‌ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದುವೇಳೆ ಪ್ರವಾದಿ ಮಹಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್‌ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ‌ ಎಂದರು.

ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸುತ್ತೇನೆ. ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version