ರಾಜಕೀಯ
ಸಿದ್ದು- ರೆಡ್ಡಿ ಆರೋಪ- ಪ್ರತ್ಯಾರೋಪ; ಜೈಲಿಗೆ ಕಳುಹಿಸಿದ್ದು ನಿಮ್ಮವರೇ ಸಿದ್ದು ಟಾಂಗ್
ಸುದ್ದಿದಿನ ಡೆಸ್ಕ್ : ಐದು ಕ್ಷೇತ್ರಗಳ ಉಪ ಚುನಾವಣೆಯ ಕಾವೇರುತ್ತಿದ್ದು, ರಾಜಕೀಯ ಮುಖಂಡರ ಆರೋಪ- ಪ್ರತ್ಯಾರೋಪಕ್ಕೆ ವೇದಿಕೆ ಸಿಕ್ಕಂತಾಗಿದೆ.
ಸಿದ್ದರಾಮಯ್ಯನವರು ಅನ್ಯಾಯವಾಗಿ ತನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಜನಾರ್ಧನ ರೆಡ್ಡಿ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತ್ಯಾರೋಪವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಜೈಲಿಗೆ ಯಾರು ಹಾಕಿಸಿದ್ದಾರೆ ಎಂದು ತಿಳಿದುಕೊಳ್ಳಲಿ. ನಿಮ್ಮ ಪಕ್ಷದ ಸಂಸದರೇ ಬರೆದಿದ್ದ ಈ ಪುಸ್ತಕ ಓದಿ. ಜೈಲಿಗೆ ಹೋಗುವ ಪಾಪ ಏನು ಮಾಡಿದ್ದೀರಿ ಎಂದು ಗೊತ್ತಾಗುತ್ತೆ ಎಂದು ಹೇಳಿದ್ದಾರೆ.
ಸನ್ಮಾನ್ಯ ಜನಾರ್ದನ ರೆಡ್ಡಿಯವರೇ, ನೀವು ಜೈಲಲ್ಲಿ ಕೊಳೆಯುವಂತೆ ಮಾಡಿದ್ದು ಯಾರೆಂದು ತಾನು ಬರೆದ ಪುಸ್ತಕದಲ್ಲಿದೆ ಎಂದು ನಿಮ್ಮ ಗೆಳೆಯ ಪ್ರತಾಪಸಿಂಹ ಟ್ವೀಟ್ ಮಾಡಿದ್ದರು ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಮಾತೃಪೂರ್ಣ, ಕ್ಷೀರಧಾರೆ, ಆರೋಗ್ಯ ಕರ್ನಾಟಕ, ರೈತ ಬೆಳಕು ಯೋಜನೆ ಮಾಡಿದೆ. ಆದರೆ, ಬಿಜೆಪಿ ಸರ್ಕಾರದ ಗಣಿಲೂಟಿಕೋರನ್ನು ಕೊಡುಗೆ ನೀಡಿದೆ. ಜನಾರ್ದನ ರೆಡ್ಡಿ ಸೋದರರು ಮತ್ತು ಅವರ ಬೆಂಬಲಕ್ಕೆ ಬಂಟ ಶ್ರೀರಾಮುಲು ನಿಂತಿದ್ದಾರೆ ಎಂದು ದೂರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243